Published
10 months agoon
By
Akkare Newsಹೊಸದಿಲ್ಲಿ: ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಭಾರತದ ಪ್ರಧಾನಮಂತ್ರಿಯಾಗಿ ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಧಾನಿ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ ಬಳಿಕ ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಗರಿ ಜೆ.ಪಿ.ನಡ್ಡಾ,ಶಿವರಾಜ್ ಸಿಂಗ್ ಚೌಹಾಣ್, ನಿರ್ಮಲಾ ಸೀತಾರಾಮನ್, ಎಸ್. ಜೈಶಂಕರ್, ಮನೋಹರ್ ಲಾಲ್ ಕಟ್ಟರ್, ಎಚ್.ಡಿ.ಕುಮಾರಸ್ವಾಮಿ,ಪಿಯೂಷ್ ಗೋಯಲ್, ಜೀತನ್ ರಾಮ್ ಮಾಂಜಿ, ಜೆಡಿಯು ನಾಯಕ ರಾಜೀವ್ ರಂಜನ್ ಸಿಂಗ್, ಸರ್ಬಾನಂದ್ ಸೋನಾವಾಲ್, ಡಾ. ವಿರೇಂದ್ರ ಕುಮಾರ್, 36 ರ ಹರೆಯದ ಟಿಡಿಪಿ ಸಂಸದ ಕಿಂಜರಾಪು ರಾಮ್ ಮೋಹನ್ ನಾಯ್ಡು, ಪ್ರಹ್ಲಾದ್ ಜೋಶಿ,ಜುಯಲ್ ಓರಮ್, ಗಿರಿರಾಜ್ ಸಿಂಗ್, ಅಶ್ವಿನಿ ವೈಷ್ಣವ್, ಜ್ಯೋತಿರಾದಿತ್ಯ ಸಿಂಧಿಯಾ, ಗಜೇಂದ್ರ ಸಿಂಗ್ ಶೇಖಾವತ್, ಅನ್ನ ಪೂರ್ಣ ದೇವಿ, ಹರದೀಪ್ ಸಿಂಗ್ ಪುರಿ, ಮನ್ಸುಖ್ ಮಾಂಡವೀಯ ಅವರು ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಪ್ರಮಾಣ ವಚನ ಸಮಾರಂಭದಲ್ಲಿ ಕೈಗಾರಿಕೋದ್ಯಮಿಗಳಾದ ಗೌತಮ್ ಅದಾನಿ, ಮುಖೇಶ್ ಅಂಬಾನಿ, ಸೂಪರ್‌ಸ್ಟಾರ್‌ಗಳಾದ ಶಾರುಖ್ ಖಾನ್, ರಜನಿಕಾಂತ್, ಅಕ್ಷಯ್ ಕುಮಾರ್ ಸೇರಿದಂತೆ ಸಾವಿರಾರು ಅತಿಥಿಗಳು ಭಾಗಿಯಾದರು.