ನಮ್ಮೊಂದಿಗೆ ಸಂಪರ್ಕ ಸಾಧಿಸಿ

ರಾಜಕೀಯ

ನರೇಂದ್ರ ಮೋದಿ ಇಂದು ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ

Published

on

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು (ಜೂನ್ 9 ರ ಭಾನುವಾರ) ಸಂಜೆ 7:15 ರ ಸುಮಾರಿಗೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಸತತ ಮೂರನೇ ಅವಧಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಲಿದೆ. ಶುಕ್ರವಾರ ನಡೆದ ಸಭೆಯಲ್ಲಿ, ಹೊಸದಾಗಿ ಆಯ್ಕೆಯಾದ ಸಂಸದರು ಸರ್ವಾನುಮತದಿಂದ ಮೋದಿಯನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದರು. ಇದೀಗ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲು ನರೇಂದ್ರ ಮೋದಿ ಸಜ್ಜಾಗಿದ್ದಾರೆ. ಸಮಾರಂಭವನ್ನು ಟಿವಿ ಸುದ್ದಿ ವಾಹಿನಿಗಳು ಮತ್ತು X ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.

ಸಮಾರಂಭಕ್ಕೆ 8000ಕ್ಕೂ ಹೆಚ್ಚು ಗಣ್ಯರು ಆಗಮಿಸುವ ನಿರೀಕ್ಷೆಯಿದೆ. ವಿವಿಧ ದೇಶಗಳ ವಿದೇಶಿ ನಾಯಕರು ಭಾಗವಹಿಸಲು ಆಹ್ವಾನವನ್ನು ಸ್ವೀಕರಿಸಿದ್ದಾರೆ. ಅವರು ಇಂದು ನವದೆಹಲಿಗೆ ಆಗಮಿಸುವ ಯೋಜನೆ ಇದೆ. ಸಮಾರಂಭದ ನಂತರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯೋಜಿಸಿರುವ ಔಪಚಾರಿಕ ಔತಣ ಕೂಟದಲ್ಲಿ ಗಣ್ಯರು ಪಾಲ್ಗೊಳ್ಳಲಿದ್ದಾರೆ.

 

ಘಟಾನುಘಟಿ ನಾಯಕರು ಸಮಾರಂಭದಲ್ಲಿ ಪಾಲ್ಗೊಳ್ಳಲು ಸಜ್ಜಾಗುತ್ತಿರುವ ಕಾರಣ ದೆಹಲಿಯು ಭಾನುವಾರ ಹೈ ಅಲರ್ಟ್ ಆಗಿದೆ. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ನೇಪಾಳದ ಪ್ರಧಾನಿ ಪುಷ್ಪಾ ಕಮಲ್ ದಹಲ್, ಮಾಲ್ಡೀವಿಯನ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಇತರರು ಮೋದಿಯವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement