Published
7 months agoon
By
Akkare Newsಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು (ಜೂನ್ 9 ರ ಭಾನುವಾರ) ಸಂಜೆ 7:15 ರ ಸುಮಾರಿಗೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಸತತ ಮೂರನೇ ಅವಧಿಗೆ ಕೇಂದ್ರದಲ್ಲಿ ಸರ್ಕಾರ ರಚಿಸಲಿದೆ. ಶುಕ್ರವಾರ ನಡೆದ ಸಭೆಯಲ್ಲಿ, ಹೊಸದಾಗಿ ಆಯ್ಕೆಯಾದ ಸಂಸದರು ಸರ್ವಾನುಮತದಿಂದ ಮೋದಿಯನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದರು. ಇದೀಗ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲು ನರೇಂದ್ರ ಮೋದಿ ಸಜ್ಜಾಗಿದ್ದಾರೆ. ಸಮಾರಂಭವನ್ನು ಟಿವಿ ಸುದ್ದಿ ವಾಹಿನಿಗಳು ಮತ್ತು X ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.
ಘಟಾನುಘಟಿ ನಾಯಕರು ಸಮಾರಂಭದಲ್ಲಿ ಪಾಲ್ಗೊಳ್ಳಲು ಸಜ್ಜಾಗುತ್ತಿರುವ ಕಾರಣ ದೆಹಲಿಯು ಭಾನುವಾರ ಹೈ ಅಲರ್ಟ್ ಆಗಿದೆ. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ನೇಪಾಳದ ಪ್ರಧಾನಿ ಪುಷ್ಪಾ ಕಮಲ್ ದಹಲ್, ಮಾಲ್ಡೀವಿಯನ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಇತರರು ಮೋದಿಯವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.