ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

1801 ನೇ ಮದ್ಯವರ್ಜನ ಶಿಬಿರ.

Published

on

ಪೆರ್ಲ ಜೂನ್ 11,. ಮಧ್ಯ ವ್ಯಸನ ಬಿಟ್ಟು ಹೊಸ ಜೀವನ ಕಟ್ಟಿಕೊಳ್ಳಿ, ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಗಳಾಗಿ ಎಂದು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಇಡಿಯಡ್ಕದ ಮುಖ್ಯ ಅರ್ಚಕರಾದ ಕೃಷ್ಣರಾಜ್ ಪುಣಿ೦ಚಿತ್ತಾಯ ಶುಭ ಹಾರೈಸಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಮಂಜೇಶ್ವರ ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ ) ಮಂಜೇಶ್ವರ ತಾಲೂಕು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಮದ್ಯ ವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿ ಮಂಜೇಶ್ವರ,ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪೆರ್ಲ, ನವಜೀವನ ಸಮಿತಿಗಳು ಮಂಜೇಶ್ವರ ತಾಲೂಕು, ಸ್ಥಳೀಯ ಸಂಘ ಸಂಸ್ಥೆ ಹಾಗೂ ದಾನಿಗಳ ಸಹಕಾರದೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತ ಮತ್ತು ಸಂಶೋಧನಾ ಕೇಂದ್ರ ಲಾಯಿಲಾ ಬೆಳ್ತಂಗಡಿ ಇದರ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ಜರಗುವ 1801 ನೇ ಮದ್ಯವರ್ಜನ ಶಿಬಿರ ವನ್ನು ಶ್ರೀ ದುರ್ಗಾಪರಮೇಶ್ವರಿ ( ಉಳ್ಳಾಲ್ತಿ ) ದೇವಸ್ಥಾನ ಇಡಿಯಡ್ಕ ಪೆರ್ಲ ಇಲ್ಲಿ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನಜಾಗೃತಿ ವೇದಿಕೆ ಮಂಜೇಶ್ವರ ಇದರ ಅಧ್ಯಕ್ಷರಾದ ಡಾ ಜಯಪ್ರಕಾಶ್ ನಾರಾಯಣ ತೊಟ್ಟಿತ್ತೋಡಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗೋಪಾಲ ಶೆಟ್ಟಿ ಅರಿಬೈಲ್ ಸ್ಥಾಪಕ ಅಧ್ಯಕ್ಷರು ಜನ ಜಾಗೃತಿ ವೇದಿಕೆ ಕಾಸರಗೋಡು, ಶಶಿಕಲಾ ಸುವರ್ಣ ಯೋಜನಾಧಿಕಾರಿಗಳು, ಶಂಕರ್ ನಾರಾಯಣ ಖಂಡಿಗೆ, ಉದಯಕುಮಾರ್ ಆನೆಬಾಗಿಲು, ಕೆ ಇಂದಿರಾ, ಶ್ರೀಧರ ಮಣಿಯಾಣಿ ವಲಯ್ಯಾಧ್ಯಕ್ಷರು, ಬಿ ಪಿ ಶೇಣಿ ವಲಯ್ಯಾಧ್ಯಕ್ಷರು ಜನಜಾಗೃತಿ ವೇದಿಕೆ ಪೆರ್ಲ, ಶ್ರೀಧರ್ ನಾಯಕ್, ಸುರೇಂದ್ರ ನಾಯಕ್ ಮಾಸ್ಟರ್ ಶೌರ್ಯ, ದೇವಿ ಪ್ರಸಾದ್ ಸುವರ್ಣ ಶಿಬಿರಾಧಿಕಾರಿ, ನೇತ್ರಾವತಿ ಆರೋಗ್ಯ ಕಾರ್ಯಕರ್ತೆ ,ಎಲ್ಲಾ ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು,ಎಲ್ಲಾ ನವಜೀವನ ಸಮಿತಿಯ ಸದಸ್ಯರು, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಜನಜಾಗೃತಿ ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ್ ಆಚಾರ್ಯ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತನಾಡಿದರು. ಪೆರ್ಲ ಮೇಲ್ವಿಚಾರಕಿ ಜಯಶ್ರೀ ಸ್ವಾಗತಿಸಿ, ಕುಂಬ್ಳೆ ವಲಯ ಮೇಲ್ವಿಚಾರಕ ರಮೇಶ್ ವಂದಿಸಿದರು.ಮೇಲ್ವಿಚಾರಕ ಭಾಸ್ಕರ್ ಕಾರ್ಯಕ್ರಮ ನಿರೂಪಿಸಿದರು.

ಕೆಲವು ತಿಂಗಳುಗಳ ಹಿಂದೆ ಕೊಳ್ತಿಗೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಭಾರೀ ಗದ್ದಲ ಎಬ್ಬಿಸಿದ ಕಾಡಾನೆಯನ್ನು ಅರಣ್ಯ ಇಲಾಖೆಯವರು ಅಲ್ಲಿಂದ ಬೆನ್ನಟ್ಟುವಲ್ಲಿ ಯಶಸ್ವಿಯಾಗಿದ್ದರು. ಅದಾದ ಬಳಿಕ ಕೆಲವು ತಿಂಗಳು ಕಳೆದ ನಂತರ ಆನೆ ಸವಣೂರು ಗ್ರಾಮದ ಕುಮಾರಮಂಗಲ, ಪುಣ್ಚಪ್ಪಾಡಿ ಪ್ರದೇಶದಲ್ಲಿ ಕಾಣಿಸಿಕೊಂಡು ಜನರನ್ನು ಭಯಭೀತರನ್ನಾಗಿಸಿತ್ತು.

ಜೂ. 5 ರಂದು ಸವಣೂರು ಗ್ರಾಮದಿಂದ ಆನೆ ಕೆಯ್ಯೂರು ಗ್ರಾಮದ ತೆಗ್ಗು, ಓಲೆಮುಂಡೋವು ಪರಿಸರಕ್ಕೆ ತೆರಳಿತ್ತು. ಅಲ್ಲಿಯೂ ಒಂದಷ್ಟು ಕೃಷಿ ಹಾನಿಯುಂಟು ಮಾಡಿತ್ತು. ತೆಗ್ಗು ಎರಬೈಲು ಗುಡ್ಡದಲ್ಲಿದ್ದ ಆನೆಯನ್ನು ಅರಣ್ಯ ಇಲಾಖೆಯವರು ಮತ್ತೆ ಹಿಂದಿರುಗುವಂತೆ ಮಾಡಿದ್ದರು. ಆ ಬಳಿಕ ನರಿಮೊಗರು ಗ್ರಾಮದ ವೀರಮಂಗಲಕ್ಕೆ ಕಾಲಿಟ್ಟಿತ್ತು. ಜೂ.10 ಕ್ಕೆ ಶಾಂತಿಗೋಡು ಗ್ರಾಮಕ್ಕೆ ತಲುಪಿತ್ತು. ಶಾಂತಿಗೋಡಿನ ಗೇರು ಅಭಿವೃದ್ಧಿ ಮತ್ತು ಸಂಶೋಧನಾ ಕೇಂದ್ರದ ಗೇರು ತೋಪಿನೊಳಗೂ ನುಗ್ಗಿತ್ತು. ಅಲ್ಲಿಂದ ಜೂ.11 ರ ನಸುಕಿನ ಜಾವ ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರದ ಬಾರ್ತೋಲಿ ಎಂಬಲ್ಲಿ ತೋಟದಲ್ಲಿ ಕಂಡು ಬಂದಿದೆ ಎಂದು ಹೇಳಲಾಗಿದೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version