ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ : ಮೇ 11 : ಮುಳಿಯ ಜ್ಯುವೆಲ್ಸ್ ನಲ್ಲಿ ಮುಳಿಯ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ - ಚಿಣ್ಣರ ಚಿತ್ರೋತ್ಸವ' ಚಿತ್ರಕಲೆ ಸ್ಪರ್ಧೆಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗ್ರಾಮ ಸುಭಿಕ್ಷ ಕಾರ್ಯಕ್ರಮದ ಅಂಗವಾಗಿ ನೆಟ್ಲಾ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ "ಸೀಯಾಳ ಅಭಿಷೇಕ"ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮಂಗಳೂರು : ಸುರತ್ಕಲ್ NITK ಸ್ಟ್ರಾಂಗ್ ರೂಂ ಸೇರಿದ ಅಭ್ಯರ್ಥಿಗಳ ಭವಿಷ್ಯಕ್ಕೆ ಬಿಗಿ ಭದ್ರತೆ..!ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೋದಿಯನ್ನು ಪ್ರಧಾನಿ ಮಾಡುವುದೇ ವಧುವರರಿಗೆ ನೀಡುವ ಉಡುಗೊರೆ|ಮದುವೆ ಕಾರ್ಡ್ ವೈರಲ್, ಮದುಮಗನ ವಿರುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕ ಕಲ್ಯಾಣಾರ್ಥವಾಗಿ ನಾಳೆ ಏ.22 ಮಹಾಲಿಂಗೇಶ್ವರ ದೇವಸ್ಥಾನದಲ್ಲಿ "ಸೀಯಾಳಭಿಷೇಕ"ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಜ್ಞಾನ ಜಾಗರಣೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಕನ್ನಡ ಭಕ್ತಿಗೀತೆ ಬಿಡುಗಡೆ.ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬಂದುತ್ವಕ್ಕೆ ಸಾಕ್ಷಿಯಾದ ಶೇಕಮಲೆ ಮಸೀದಿ, ನೂರಾರು ಜನರ ಸಮ್ಮುಖದಲ್ಲಿ ಉಚಿತ ಸೇವೆ ಮಾಡಿದ ಚಿನ್ನಯ ಆಚಾರಿ ಯವರಿಗೆ ಗೌರವಾರ್ಪಣೆ, ಮಸೀದಿ ಆಡಳಿತ ವರ್ಗದವರಿಗೆ ಭಾವಪೂರ್ಣವಾಗಿ ಅಭಿನಂದನೆ ಸಲ್ಲಿಸಿದ ಚಿನ್ನಯ ಆಚಾರಿಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ಳಾರೆಯ ಗೌರಿಪುರಂ ರಾಜರಾಜೇಶ್ವರಿ ಕ್ಷೇತ್ರದಲ್ಲಿ 1300 ವರ್ಷ ಹಳೆಯ ಶಾಸನ ಪತ್ತೆ-ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಶಾಸನ- ಶೋಧನ- ಅಧ್ಯಯನ -ಸಂರಕ್ಷಣ ತಂಡದಿಂದ ಕುರುಹುಗಳ ಪರಿಶೀಲನೆಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಶಾಲಾ ಚಟುವಟಿಕೆ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಿಕ್ಷಣಕ್ಕೆಬೇಕಾದ ಪೂರಕ ಸನ್ನಿವೇಶಗಳನ್ನು ಶಾಲಾ ಮಟ್ಟದಲ್ಲಿ ಒದಗಿಸಿದಾಗ ಶಿಕ್ಷಣವು ಗಟ್ಟಿಯಾಗುತ್ತದೆ: ರೊಟೇರಿಯನ್ ಗಣೇಶ್ ಶೆಟ್ಟಿ .ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ" ಪದ್ಮರಾಜ್" ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ "ಪದ್ಮರಾಜ್" ಬಗ್ಗೆ ತಿಳಿದಿದೆಯೇ ...... ಸರ್ವಧರ್ಮದವರನ್ನು ಸಮಾನವಾಗಿ ಕಾಣುವ" ಪದ್ಮರಾಜ್" ಇಲ್ಲಿದೆ ನೋಡಿ ಫುಲ್ ಡೀಟೇಲ್ಸ್.....ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚಿಣ್ಣರ ಲೋಕ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಶಾಲಾ ಚಟುವಟಿಕೆ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮಾ 22,23 ಅಕ್ಷಯ ಕಾಲೇಜ್ ನಲ್ಲಿ ಅಕ್ಷಯ ವೈಭವ 2K24ಅಂತರರಾಷ್ಟ್ರೀಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ: ವಿಶ್ವ ಮಹಿಳಾ ದಿನಾಚರಣೆ ಆಚರಣೆ , ಮಕ್ಕಳಿಗೆ ಜೀವನ ಶಿಕ್ಷಣ ನೀಡಿ - ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನ ; ಪ್ರೊಫೆಸರ್ ಶ್ರೀಮತಿ ತ್ರಿಶಲಾ ಜೈನ್ ಕೆ.ಎಸ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆದಂಬಾಡಿ ಗ್ರಾಪಂ ವ್ಯಾಪ್ತಿಯಲ್ಲಿ ೫೫ ಲಕ್ಷ ರೂ.ವೆಚ್ಚದ ಕಾಮಗಾರಿಗಳಿಗೆ ಶಾಸಕರಿಂದ ಗುದ್ದಲಿಪೂಜೆ ಸರಕಾರದ ಗ್ಯಾರಂಟಿಗಳನ್ನು ಮನೆ ಬಾಗಿಲಿಗೆ ತಲುಪಿಸಿ, ಕಾರ್ಯಕರ್ತರಿಗೆ ಅಶೋಕ್ ರೈ ಕರೆಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕಬಕ ಗ್ರಾಮದ ೨೪ ಮಂದಿಗೆ ನಿವೇಶನ ಹಕ್ಕುಪತ್ರ ವಿತರಣೆ ತಾಲೂಕಿನ ಪ್ರತೀ ಗ್ರಾಮದಲ್ಲೂ ಬಡವರಿಗೆ ನಿವೇಶನ ನೀಡುವಲ್ಲಿ ಕ್ರಮ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಚಿಣ್ಣರ ಲೋಕ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಶಾಲಾ ಚಟುವಟಿಕೆ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇವಲ ಪಠ್ಯಪುಸ್ತಕದಿಂದ ಕಲಿಕೆಯು ಪೂರ್ಣವಾಗುವುದಿಲ್ಲ : ಸುಧೀರ್ ಸಾಗರ್ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚಿಣ್ಣರ ಲೋಕ ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಿಶೇಷ ವರದಿ ಶಾಲಾ ಚಟುವಟಿಕೆ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಹೆಣ್ಣು ಗಂಡುವಿನ ನಡುವೆ ಲಿಂಗಾನುಪಾತ ಅಪಾಯಕಾರಿಯಾಗಿದೆ: ಶಾಸಕ ಅಶೋಕ್ ರೈಅಭಿನಂದನೆ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಯೋಜನೆಗಳು ವಾಣಿಜ್ಯ ವಿಶೇಷ ವರದಿ ಶಾಲಾ ಚಟುವಟಿಕೆ ಸಾಮಾನ್ಯ ಸ್ಥಳೀಯ
ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಹಳೆ ವಿದ್ಯಾರ್ಥಿ ಅನಿಲ್ ಸಿಕ್ವೇರಾ ಕರ್ನಾಟಕದ ಅತ್ಯಂತ ಕಿರಿಯ ನ್ಯಾಯಾಧೀಶ;25ನೇ ವಯಸ್ಸಿಗೆ ಅಪ್ರತಿಮ ಸಾಧನೆಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಡಾ. ವೀಣಾ ಸಂತೋಷ್ ರೈ ಅವರಿಂದ ಚಿನ್ನದ ಕವಚ ಸಮರ್ಪಣೆ ಮೂಲಕ ಪತಿಯ ಸಂಕಲ್ಪ ಈಡೇರಿಸಿದ ಪತ್ನಿPublished
6 months agoon
By
Akkare Newsಕಡಬ: ಕಡಬ ಹಾಗೂ ಕೋಡಿಂಬಾಳ ಗ್ರಾಮಗಳನ್ನೊಳ ಗೊಂಡ ಕಡಬ ಗ್ರಾಮ ಪಂಚಾಯತ್ ಪಟ್ಟಣ ಪಂಚಾಯತ್ ಆಗಿ
ಮೇಲ್ದರ್ಜೆಗೇರಿ ನಾಲ್ಕು ವರ್ಷಗಳು ಸಂದರೂ ಇಲ್ಲಿಗೆ ಆಡಳಿತ ಮಂಡಳಿ ಚುನಾವಣೆಯೇ ನಡೆದಿಲ್ಲ.ಆರಂಭ ದಿಂದಲೂ ಅಧಿಕಾರಿಗಳ ಪಾರು ಪತ್ಯದಲ್ಲೇ ಇರುವ ಇಲ್ಲಿನ ಸಮಸ್ಯೆಗಳನ್ನು ಕೇಳುವವರೇ ಇಲ್ಲದಂತಾಗಿದೆ.
ಕಡಬ ತಾಲೂಕು ಕೇಂದ್ರವಾಗಿ ರೂಪುಗೊಂಡ ಬಳಿಕ ತಾಲೂಕು ಕೇಂದ್ರವಾಗಿರುವ ಕಡಬ ಪಟ್ಟಣ ಗ್ರಾಮ ಪಂಚಾಯತ್ನಿಂದ ಸಹಜವಾಗಿ ಜನಸಂಖ್ಯೆ ಆಧಾರದಲ್ಲಿ ಪ. ಪಂ.ಆಗಿ ಮೇಲ್ದರ್ಜೆಗೇರಿದೆ. ಹಿಂದೆ ಗ್ರಾಮ ಪಂಚಾಯತ್ ಕಾರ್ಯನಿರ್ವಹಿಸುತ್ತಿದ್ದ ಕಟ್ಟಡದಲ್ಲಿಯೇ ಪಟ್ಟಣ ಪಂಚಾಯತ್ ಕಾರ್ಯನಿರ್ವಹಿಸುತ್ತಿದ್ದು, ಹಿಂದೆ ಗ್ರಾ. ಪಂ.ನಲ್ಲಿ ಸಿಬಂದಿಯಾಗಿದ್ದವರೇ ಪಟ್ಟಣ ಪಂಚಾಯತ್ ಸಿಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಗ್ರಾ. ಪಂ.ನಿಂದ ಪ. ಪಂ.ಗೆ ಮೇಲ್ದರ್ಜೆಗೇರಿದಾಗ ಒಂದೆರಡು ವರ್ಷ ಕಡತಗಳನ್ನು ತಯಾರಿಸಿ ಕಂಪ್ಯೂಟರ್ ಗೆ ಅಪ್ಲೋಡ್ ಮಾಡುವುದೇ ಕೆಲಸವಾಯಿತು. ಪ್ರಾರಂಭದಲ್ಲಿ ಪ್ರಭಾರ ಮುಖ್ಯಾಧಿಕಾರಿ ಕಾರ್ಯನಿರ್ವಹಿಸಿದರೆ ಬಳಿಕ ಮುಖ್ಯಾಧಿಕಾರಿ ಹುದ್ದೆ ಭರ್ತಿ ಮಾಡಲಾಯಿತು. ಆಡಳಿತಾಧಿಕಾರಿಯಾಗಿ ತಹಶೀಲ್ದಾರ್ ಕಾರ್ಯ ನಿರ್ವಹಿಸುತ್ತಿದ್ದಾರೆ.
ಹುದ್ದೆಗಳು ಖಾಲಿ
ಮುಖ್ಯಾಧಿಕಾರಿ ಹುದ್ದೆ ಮಾತ್ರ ಭರ್ತಿಯಾಗಿದ್ದು, ಆರೋಗ್ಯ ನಿರೀಕ್ಷಕರು, ಎಂಜಿನಿಯರ್ ಹುದ್ದೆಗಳು ಪ್ರಭಾರವಾಗಿ ಕಾರ್ಯನಿರ್ವಹಿಸುತ್ತಿದೆ. ಒಟ್ಟು 40 ಹುದ್ದೆಗಳಿದ್ದು ಆ ಪೈಕಿ 33 ಹುದ್ದೆಗಳು ಖಾಲಿ ಇವೆ. ಪೌರ ಕಾರ್ಮಿಕರನ್ನು ನೇರ ಪಾವತಿಯಲ್ಲಿ ನೇಮಕ ಮಾಡಿಕೊಳ್ಳಲಾಗಿದೆ.
ಕೆಲವು ಸಿಬಂದಿಯನ್ನು ಹೊರ ಗುತ್ತಿಗೆಯಾಧಾರಲ್ಲಿ ನೇಮಕ ಮಾಡಿಕೊಳ್ಳಲಾಗಿದೆ. ಎಂಜಿನಿಯರ್ ಹಾಗೂ ಆರೋಗ್ಯ ನಿರೀಕ್ಷಕರು ವಾರದಲ್ಲಿ ಒಂದು ದಿನ ಮಾತ್ರ ಕಡಬದಲ್ಲಿ ಲಭ್ಯವಿರುತ್ತಾರೆ. ಅವರು ಯಾವ ದಿನ ಲಭ್ಯರಿರುತ್ತಾರೆ ಎನ್ನುವ ಮಾಹಿತಿಯೂ ಸ್ಪಷ್ಟವಿಲ್ಲ. ಅದರಿಂದಾಗಿ ಜನ ಸಾಮಾನ್ಯರಿಗೆ ತೀವ್ರ ತೊಂದರೆಯಾಗುತ್ತಿದೆ.
ವ್ಯಾಪಾರ ಪರವಾನಿಗೆಯಿಂದ ಹಿಡಿದು ವಿವಿಧ ಕೆಲಸ ಕಾರ್ಯಗಳಿಗೆ ದಿನ ನಿತ್ಯ ಹಲವಾರು ಗ್ರಾಮಸ್ಥರು ಪಂ.ಗೆ ಭೇಟಿ ನೀಡುತ್ತಿದ್ದು, ಇಲ್ಲಿ ಕೆಲಸಗಳಿಗಾಗಿ ಪದೇ ಪದೇ ಅಲೆದಾಡಬೇಕಿದೆ ಎನ್ನುವುದು ಬಹುತೇಕ ಗ್ರಾಮಸ್ಥರ ಆರೋಪ. ಬಹುತೇಕ ಸಂದರ್ಭಗಳಲ್ಲಿ ಇಲ್ಲಿ ಕೊಟ್ಟ ಅರ್ಜಿಗಳು, ದಾಖಲೆಗಳು ನಾಪತ್ತೆ ಯಾಗುತ್ತವೆ. ತಿಂಗಳು ಗಟ್ಟಳೆ ಅದನ್ನು ಹುಡುಕಿ ಕೊನೆಗೆ ಹೊಸ ಅರ್ಜಿ, ದಾಖಲೆ ಕೊಡುವ ಪರಿಸ್ಥಿತಿ ಎದುರಾದ ಹಲವು ಉದಾಹರಣೆಗಳು ಇಲ್ಲಿವೆ. ಇಲ್ಲಿನ ಕೆಲವು ಸಿಬಂದಿ ಕಚೇರಿಗೆ ಬರುವ
ಜನರ ಜತೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎನ್ನುವ ದೂರುಗಳೂ ಇವೆ.
ಸಮರ್ಪಕವಾಗಿ ಅನುದಾನ ಬಳಕೆಯಾಗಿಲ್ಲ
ಪಟ್ಟಣ ಪಂಚಾಯತ್ ನಿಂದ ಹಲವಾರು ಅಭಿವೃದ್ಧಿ ಕಾರ್ಯಗಳು ಈಗಾಗಲೇ ನಡೆದಿವೆ. ಆದರೆ ಅನುದಾನಗಳು ಸಮರ್ಪಕವಾಗಿ ಬಳಕೆಯಾಗಿಲ್ಲ ಎನ್ನುವ ಆರೋಪ ಬಲವಾಗಿ ಕೇಳಿ ಬರುತ್ತಿದೆ. ಅದಕ್ಕೆ ಪೂರಕ ಎಂಬಂತೆ ಕೆಲವು ದಿನಗಳ ಹಿಂದೆ ಕಡಬಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಯವರು ನಗರೋತ್ಥಾನ ಯೋಜನೆಯ ಕಾಮಗಾರಿ ಪರಿಶೀಲಿಸಿ ಎಂಜಿನಿಯರ್ ಹಾಗೂ ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು.
ಕಳಾರ, ಕೋಡಿಬೈಲು, ಪನ್ಯ, ಬೆದ್ರಾಜೆ, ಮಾಲೇಶ್ವರ, ಕಡಬ, ಪಣೆಮಜಲು, ಪಿಜಕಳ, ಮೂರಾಜೆ, ದೊಡ್ಡಕೊಪ್ಪ, ಕೋಡಿಂಬಾಳ, ಮಜ್ಜಾರು, ಪುಳಿಕುಕ್ಕು ಎಂದು 13 ವಾರ್ಡುಗಳನ್ನಾಗಿ ಪಟ್ಟಣ ಪಂಚಾಯತ್ ವ್ಯಾಪ್ತಿಯನ್ನು ವಿಂಗಡಣೆ ಮಾಡಲಾಗಿದೆ. 2011ರ ಜನಗಣತಿ ಪ್ರಕಾರ ಎರಡು ಗ್ರಾಮಗಳಲ್ಲಿ 10500 ಜನಸಂಖ್ಯೆ ಇದೆ.
ನಗರಾಭಿವೃದ್ಧಿ ಸಚಿವರಿಗೆ ಮನವಿ
ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಾರ್ಡ್ ವಿಂಗಡಣೆ ಇತ್ಯಾದಿ ಕೆಲಸಗಳು ಈಗಾಲೇ ಪೂರ್ತಿಗೊಂಡಿದೆ. ಅಗತ್ಯ ಸಿಬಂದಿ ನೇಮಕ ಮತ್ತು ಶೀಘ್ರ ಇಲ್ಲಿ ಚುನಾವಣೆ ನಡೆಸಿ ಜನರಿಗೆ ಅನುಕೂಲವಾಗುವಂತೆ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳನ್ನು ಆರಿಸಲು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ನಗರಾಭಿವೃದ್ಧಿ ಸಚಿವರಲ್ಲಿ ಮನವಿ ಮಾಡಲಾಗುವುದು.
*ಭಾಗೀರಥಿ ಮುರುಳ್ಯ, ಶಾಸಕರು, ಸುಳ್ಯ