Published
6 months agoon
By
Akkare Newsತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿರುವ ಖಾಸಗಿ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಎಂಟು ಹಣ್ಣಿನ ಮಳಿಗೆಗಳು ಸಂಪೂರ್ಣ ಭಸ್ಮವಾಗಿದ್ದು, ಒಂದೇ ಸಾಲಿನಲ್ಲಿರುವ 24 ಮಳಿಗೆಗಳಿಗೆ ಬೆಂಕಿ ವ್ಯಾಪಿಸಿ ಲಕ್ಷಾಂತರ ಮೌಲ್ಯದ ಹಣ್ಣುಗಳು ಬೆಂಕಿಗೆ ಆಹುತಿಯಾಗಿದ್ದು, ಘಟನಾ ಸ್ಥಳಕ್ಕೆ ಕಾಂಗ್ರೆಸ್ ಮುಖಂಡರು, ಕೆಪಿಸಿಸಿ ಪ್ರಧಾನ ಕಾಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಅಧಿಕಾರಿಗಳೊಂದಿಗೆ ಮಾತನಾಡಿ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ದೊರಕಿಸಿಕೊಡುವಂತೆ ಸೂಚಿಸಿದರು.ಬೆಂಕಿಗಾಹುತಿಯಾದ ಅಂಗಡಿ ಮಾಲೀಕರೊಂದಿಗೆ ಮಾತನಾಡಿದ ಪದ್ಮರಾಜ್‌ರವರು ನಿಮ್ಮೊಂದಿಗೆ ನಾವಿದ್ದೇವೆ ಎಂದು ಭರವಸೆ ನೀಡಿದರು.