ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸಿನಿಮಾ ಸ್ಥಳೀಯ
ಮಾ.1 ; ಕರಾವಳಿಗರ ಮನೆ-ಮನದ ದುಬೈ ಕಥೆ; ಪ್ರವಾಸಿ ಜೀವನಕ್ಕೆ ಜೀವ ತುಂಬಿದ ಪುರುಷ..! ''ಪುರುಷೋತ್ತಮನ ಪ್ರಸಂಗ'" ಅಮೋಘ ಆರಂಭಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ವಿಶೇಷ ವರದಿ ಸಭೆ - ಸಮಾರಂಭ ಸಾಮಾನ್ಯ ಸಿನಿಮಾ ಸ್ಥಳೀಯ
ಪುತ್ತೂರಿನ ಯುವ ನಿರ್ದೇಶಕ ಕಿಶನ್ ಬಲ್ನಾಡ್ ನಿರ್ದೇಶನದಲ್ಲಿ ಹೊಸ ಚಲನಚಿತ್ರದ ಮುಹೂರ್ತ.Published
6 months agoon
By
Akkare Newsಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಮೈಸೂರಿನಲ್ಲಿ ಪೊಲೀಸರು ದರ್ಶನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಕೊಲೆ ಪ್ರಕರಣದಲ್ಲಿ ಮೈಸೂರಿನಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ದರ್ಶನ್ ಸೇರಿದಂತೆ 10 ಮಂದಿಯನ್ನು ಪ್ರಕರಣ ಸಂಬಂಧ ಬಂಧಿಸಲಾಗಿದೆ. ವಿಜಯನಗರ ಎಸಿಪಿ ನೇತೃತ್ವದಲ್ಲಿ ಅವರನ್ನು ಬಂಧಿಸಲಾಗಿದೆ.
ಏನಿದು ಪ್ರಕರಣ?: ನಟ ದರ್ಶನ್ ಅವರಿಗೆ ಆತ್ಮೀಯವಾಗಿರುವ ನಟಿ ಪವಿತ್ರ ಗೌಡ ಅವರ ಫೋಟೋಗಳಿಗೆ ರೇಣುಕಾ ಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಆಶ್ಲೀಲವಾಗಿ ಕಮೆಂಟ್ ಮಾಡುತ್ತಿದ್ದ. ಇದಲ್ಲದೆ ಕೆಟ್ಟದಾಗಿ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದೆ.
ದೇಹದ ಮೇಲಿನ ಗಾಯಗಳನ್ನು ಗುರುತಿಸಿ ತನಿಖೆಯನ್ನು ಆರಂಭಿಸಲಾಗಿದೆ. ಇದು ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವುದು ಗೊತ್ತಾಗಿದೆ. ಈ ಬಗ್ಗೆ ಪೊಲೀಸರು ಪೋಷಕರಿಗೆ ಮಾಹಿತಿ ನೀಡಿದ್ದಾರೆ. ವಶಕ್ಕೆ ಪಡೆದ ನಾಲ್ವರು ಆರೋಪಿಗಳು ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ಮಾಡಿರುವುದಾಗಿ ಆರೋಪಿಗಳು ವಿಚಾರಣೆಯಲ್ಲಿ ಹೇಳಿರುವುದಾಗಿ ತಿಳಿದು ಬಂದಿದೆ.
ದರ್ಶನ್ ಸೇರಿದಂತೆ ನಾಲ್ವರು ರೇಣುಕಾ ಸ್ವಾಮಿಗೆ ಹಲ್ಲೆ ಮಾಡಿ ಕೊಲೆಗೈದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆ ಸಂದರ್ಭದಲ್ಲಿ ದರ್ಶನ್ ಅವರು ಸ್ಥಳದಲ್ಲೇ ಇದ್ದರು ಎನ್ನಲಾಗಿದೆ.
ಸದ್ಯ ದರ್ಶನ್ ಅವರನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ ಎನ್ನಲಾಗಿದೆ. ಕಾಮಾಕ್ಷಿ ಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.