Published
6 months agoon
By
Akkare Newsಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನ ಭೀಕರ ಹತ್ಯೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್, ಆತನ ಪ್ರೇಯಸಿ ಪವಿತ್ರಾ ಗೌಡ ಹಾಗೂ 11 ಮಂದಿ ಸಹಚರರನ್ನು ಬೆಂಗಳೂರು ಪೊಲೀಸರು ಮಂಗಳವಾರ ಬಂಧಿಸಿದ ಬೆನ್ನಲ್ಲೇ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರು ಇನ್ಸ್ಟಾಗ್ರಾಮ್ ಫೋಟೋ ತೆಗೆದು ಹಾಕಿದ್ದಾರೆ.
ಇನ್ಸ್ಟಾಗ್ರಾಮ್ ಫೋಟೋ ತೆಗೆದು ಹಾಕಿರುವುದು ಮಾತ್ರವಲ್ಲದೆ ದರ್ಶನ್ ಅವರನ್ನು ಅನ್ ಫಾಲೋ ಮಾಡಿದ್ದಾರೆ. ಇದು ಸಾಕಷ್ಟು ಚರ್ಚೆಗೆ ಗುರಿ ಮಾಡಿ ಕೊಟ್ಟಿದೆ.
ನಟ ದರ್ಶನ್, ಪ್ರೇಯಸಿ ಪವಿತ್ರಾ ಗೌಡ ಮತ್ತು ಸಹಚರರಾದ ವಿನಯ್, ಆರ್. ನಾಗರಾಜ್, ಎಂ. ಲಕ್ಷ್ಮಣ್, ಪ್ರದೋಷ್, ಪವನ್, ದೀಪಕ್ ಕುಮಾರ್, ನಂದೀಶ್, ಕಾರ್ತಿಕ್, ನಿಖೀಲ್, ರಾಘವೇಂದ್ರ, ಕೇಶವ ಮೂರ್ತಿ ಅವರನ್ನು ಬಂಧಿಸಲಾಗಿದೆ. ಎಲ್ಲ ಆರೋಪಿಗಳಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಕಬ್ಬನ್ ಪಾರ್ಕ್ ಆವರಣದಲ್ಲಿರುವ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ 6 ದಿನ ಪೊಲೀಸ್ ವಶಕ್ಕೆ ಪಡೆಯಲಾಗಿದೆ.