Published
6 months agoon
By
Akkare Newsಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಆರೋಪಿ ಶಶಿರಾಜ್ ಶೆಟ್ಟಿ ಹಾಗೂ ನಾಪತ್ತೆಯಾಗಿದ್ದ ಮತ್ತೋರ್ವ ಆರೋಪಿ ಪ್ರಮೋದ್ ದಿಡುಪೆ ಅವರಿಗೆ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಮೇ.18 ರಂದು ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ತಹಶೀಲ್ದಾರ್ ಪೃಥ್ವಿ ಸಾನಿಕಾಂ ನೇತೃತ್ವದ ತಂಡ ದಾಳಿ ಮಾಡಿದ್ದರು. ಅನಂತರ ಪ್ರಕರಣ ದಾಖಲು ಮಾಡಿದ್ದರು. ಈ ಪ್ರಕರಣದ ಆರೋಪಿಯಾದ ಶಶಿರಾಜ್‌ನನ್ನು ಮೇ. 18 ರಾತ್ರಿ ಬಂಧನ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಇದೀಗ ಸೆಷನ್ಸ್ ಕೋರ್ಟ್‌ನಿಂದ ಇಂದು (ಜೂ.13) ರಂದು ಶಶಿರಾಜ್ ಶೆಟ್ಟಿ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.