Published
6 months agoon
By
Akkare Newsಮಂಗಳೂರು: ಇವಿ ಚಾರ್ಜಿಂಗ್ ಕೇಂದ್ರಗಳ ಸಂಖ್ಯೆಯನ್ನು ದುಪ್ಪಟ್ಟುಗೊಳಿಸಲು ಇಂಧನ ಇಲಾಖೆ ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಹೊಸದಾಗಿ 171 ಇವಿ ಚಾರ್ಜಿಂಗ್ ಕೇಂದ್ರಗಳು ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪೆನಿ (ಮೆಸ್ಕಾಂ) ವ್ಯಾಪ್ತಿಯಲ್ಲಿ ಸ್ಥಾಪನೆಯಾಗುತ್ತಿವೆ.
.ಪ್ರಸ್ತುತ 57 ಇವಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಉಡುಪಿಯಲ್ಲಿ 12, ದ.ಕ. ಜಿಲ್ಲೆಯಲ್ಲಿ 17, ಶಿವಮೊಗ್ಗದಲ್ಲಿ 17 ಹಾಗೂ ಚಿಕ್ಕಮಗಳೂರಿನಲ್ಲಿ 11 ಕೇಂದ್ರ ಸ್ಥಾಪಿನೆಗೊಂಡಿದೆ. ಹೊಸದಾಗಿ 171 ಕೇಂದ್ರಗಳ ಸ್ಥಾಪನೆಗೆ ಟೆಂಡರ್ ಪ್ರಕ್ರಿಯೆ ನಡೆದಿದೆ.
ಪರಿಸರ ಸ್ನೇಹಿ ವಿದ್ಯುತ್ ಚಾಲಿತ ವಾಹನಗಳ ಬಳಕೆಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ಪ್ರಸ್ತುತ ರಾಜ್ಯದಲ್ಲಿ ಒಟ್ಟು 5,130 ಇವಿ ಚಾರ್ಜಿಂಗ್ ಕೇಂದ್ರಗಳಿವೆ. ಮೆಸ್ಕಾಂ ವ್ಯಾಪ್ತಿಯಲ್ಲಿ ಹೊಸದಾಗಿ 190 ಇವಿ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದರಲ್ಲಿ ಪ್ರಸ್ತುತ ದ.ಕ.ದಲ್ಲಿ 79, ಉಡುಪಿಯಲ್ಲಿ 22, ಶಿವಮೊಗ್ಗದಲ್ಲಿ 50, ಚಿಕ್ಕಮಗಳೂರು ಜಿಲ್ಲೆಯಲ್ಲಿ 20 ಸೇರಿದಂತೆ ಒಟ್ಟು 171 ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಡಿ. ಪದ್ಮಾವತಿ ಮಾಹಿತಿ ನೀಡಿದ್ದಾರೆ
ಹೆದ್ದಾರಿಗಳಲ್ಲಿ ಇವಿ ಚಾರ್ಜಿಂಗ್ ಪಾಯಿಂಟ್ಗಳ ಹೆಚ್ಚಳ
ಇವಿ ವಾಹನಗಳ ಬಳಕೆದಾರರ ದೂರ ಪ್ರಯಾಣವನ್ನು ಸುಗಮವಾಗಿಸುವ ಉದ್ದೇಶದಿಂದ ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳು ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಈಗಾಗಲೇ ಇರುವ ಇವಿ ಚಾರ್ಜಿಂಗ್ ಪಾಯಿಂಟ್ಗಳ ಸಂಖ್ಯೆಯನ್ನು ಹೆಚ್ಚಿಸಲು ಸರಕಾರ ನಿರ್ಧರಿಸರುವುದಾಗಿ ವರದಿಯಾಗಿದೆ .
ಪರಿಸರ ಸ್ನೇಹಿ ವಿದ್ಯುತ್ ಚಾಲಿತ ವಾಹನಗಳ ಬಳಕೆಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ಪ್ರಸ್ತುತ ರಾಜ್ಯದಲ್ಲಿ ಒಟ್ಟು 5,130 ಇವಿ ಚಾರ್ಜಿಂಗ್ ಕೇಂದ್ರಗಳಿವೆ. ಮೆಸ್ಕಾಂ ವ್ಯಾಪ್ತಿಯಲ್ಲಿ ಹೊಸದಾಗಿ 190 ಇವಿ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದರಲ್ಲಿ ಪ್ರಸ್ತುತ ದ.ಕ.ದಲ್ಲಿ 79, ಉಡುಪಿಯಲ್ಲಿ 22, ಶಿವಮೊಗ್ಗದಲ್ಲಿ 50, ಚಿಕ್ಕಮಗಳೂರು ಜಿಲ್ಲೆಯಲ್ಲಿ 20 ಸೇರಿದಂತೆ ಒಟ್ಟು 171 ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಡಿ. ಪದ್ಮಾವತಿ ಮಾಹಿತಿ ನೀಡಿದ್ದಾರೆ.