ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ದುರಹಂಕಾರಿಗಳನ್ನು ಶ್ರೀರಾಮ 241ಕ್ಕೆ ನಿಲ್ಲಿಸಿದ್ದಾನೆ: ಬಿಜೆಪಿ ವಿರುದ್ಧ RSS ನಾಯಕ ವಾಗ್ದಾಳಿ

Published

on

2024ರ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ನೀರಸ ಪ್ರದರ್ಶನಕ್ಕೆ ಬಿಜೆಪಿ ನಾಯಕರ ದುರಹಂಕಾರವೇ ಕಾರಣ ಎಂದು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕರಾದ RSS ಹಿರಿಯ ನಾಯಕ ಇಂದ್ರೇಶ್‌ ಕುಮಾರ್‌ ಹೇಳಿದ್ದಾರೆ.

ಜೈಪುರ ಸಮೀಪದ ಕನೋಟಾದಲ್ಲಿ ಗುರುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಇಂದ್ರೇಶ್ ಕುಮಾರ್, “ಶ್ರೀರಾಮನ ಭಕ್ತಿ ಮಾಡಿದವರು ಹಂತ ಹಂತವಾಗಿ ದುರಹಂಕಾರಿಯಾದರು. ಆ ಪಕ್ಷವನ್ನು ಅತಿದೊಡ್ಡ ಪಕ್ಷವೆಂದು ಘೋಷಿಸಲಾಯಿತು ಆದರೆ ದುರಹಂಕಾರದ ಕಾರಣದಿಂದ ಭಗವಾನ್‌ ರಾಮ ಇವರನ್ನು 241ಕ್ಕೆ ನಿಲ್ಲಿಸಿದ” ಎಂದು ಹೇಳಿದ್ದಾರೆ.

ಇದರೊಂದಿಗೆ ಬಿಜೆಪಿ ನೇತೃತ್ವದ ಎನ್‌ಡಿಎಗೆ ನೇರ ವಿರೋಧಿಯಾಗಿದ್ದ ಇಂಡಿಯಾ ಬ್ಲಾಕ್‌ಅನ್ನು ಟೀಕಿಸಿದ ಇಂದ್ರೇಶ್‌ ಕುಮಾರ್, ಪ್ರತಿಪಕ್ಷಗಳ ಮೈತ್ರಿಯನ್ನು ಹೆಸರಿಸದೆ, “ರಾಮನಲ್ಲಿ ನಂಬಿಕೆಯಿಲ್ಲದವರನ್ನು ಒಟ್ಟಾರೆಯಾಗಿ 234ಕ್ಕೆ ನಿಲ್ಲಿಸಲಾಗಿದೆ. ದೇವರ ನ್ಯಾಯವು ನಿಜ ಮತ್ತು ಆನಂದದಾಯಕವಾಗಿದೆ” ಎಂದು ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ 234 ಸ್ಥಾನಗಳನ್ನು ಪಡೆದುಕೊಂಡಿದೆ.

 

ಶ್ರೀರಾಮ ಯಾರಿಗೂ ನೋವುಂಟು ಮಾಡುವುದಿಲ್ಲ, ಎಲ್ಲರಿಗೂ ನ್ಯಾಯ ಒದಗಿಸುತ್ತಾರೆ. ರಾಮ ಯಾವತ್ತೂ ನ್ಯಾಯದ ಪರ ಎಂದು ಇಂದ್ರೇಶ್‌ ಕುಮಾರ್‌ ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ 241 ಸ್ಥಾನಗಳನ್ನು ಗೆದ್ದರೂ ಬಹುಮತದ ಮಾರ್ಕ್‌ ದಾಟಲು ವಿಫಲವಾದ ಬಿಜೆಪಿಯನ್ನು ಈ ಮೂಲಕ ತಿವಿದಿದ್ದಾರೆ. 2014ರ ಲೋಕಸಭೆ ಚುನಾವಣೆಯ ಬಳಿಕ ಬಿಜೆಪಿಯ ಕೆಟ್ಟ ಪ್ರದರ್ಶನ ಇದಾಗಿದೆ.

ದಾರ್ಷ್ಟ್ಯದಿಂದ ಕೆಲಸ ಮಾಡುವವನು ನಿಜವಾದ ಸೇವಕ ಆಗಲು ಸಾಧ್ಯವಿಲ್ಲ ಎಂದು ಇತ್ತೀಚೆಗಷ್ಟೇ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಹೇಳಿಕೆ ನೀಡಿದ್ದರು. ಇದೀಗ ಇಂದ್ರೇಶ್ ಕುಮಾರ್ ಕೂಡ ಅದೇ ದಾಟಿಯಲ್ಲಿ ಹೇಳಿಕೆ ನೀಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement