ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ಪೋಕ್ಸೋ ಪ್ರಕರಣ: ಯಡಿಯೂರಪ್ಪ ಬಂಧನಕ್ಕೆ ಹೈಕೋರ್ಟ್‌ ತಾತ್ಕಾಲಿಕ ತಡೆ

Published

on

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಕೇಸ್‌ಗೆ ಸಂಬಂಧಿಸಿದ ಪೋಕ್ಸೋ ಕೇಸ್‌ನಲ್ಲಿ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪಗೆ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿದ್ದು, ಬಿಎಸ್‌ವೈ ಬಂಧನಕ್ಕೆ ಹೈಕೋರ್ಟ್‌ ತಾತ್ಕಾಲಿಕ ತಡೆ ನಿಡಿದೆ.

ಅರ್ಜಿ ವಿಚಾರಣೆ ವೇಳೆ ಬಿಎಸ್‌ವೈಗೆ ಸೋಮವಾರವೇ ವಿಚಾರಣೆಗೆ ಹಾಜರಾಗುವಂತೆ ನ್ಯಾ.ಕೃಷ್ಣ ಎಸ್​ ದೀಕ್ಷಿತ್​​​​​ರವರ ಏಕಸದಸ್ಯ ಪೀಠ ಸೂಚಿಸಿದೆ. ಜೂ.17ರಂದು ಕೋರ್ಟ್‌ ಮುಂದೆ ಹಾಜರಾಗುವುದಾಗಿ ಬಿಎಸ್‌ವೈ ಉತ್ತರಿಸಿದ್ದಾರೆ.  ಅವರಿಗೆ ವಯಸ್ಸಾಗಿದ್ದು ಸಹಜವಾಗಿಯೇ ಅನಾರೋಗ್ಯ ಸಮಸ್ಯೆಗಳಿರುತ್ತವೆ. ಹೀಗಾಗಿ ಬಂಧಿಸಿ ತನಿಖೆಗೊಳಪಡಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಗಮನಿಸಿದೆ ಎಂದು ಹೇಳಲಾಗಿದೆ.

ಸೋಮವಾರ ವಿಚಾರಣೆಗೆ ಹಾಜರಾಗಲು ಸಿದ್ಧರಿದ್ದೀರಾ ಎಂದು ಯಡಿಯೂರಪ್ಪ ಪರ ವಕೀಲರಿಗೆ ಹೈಕೋರ್ಟ್ ಪ್ರಶ್ನೆ ಮಾಡಿದ್ದು, ಹೈಕೋರ್ಟ್ ಆದೇಶ ಪಾಲಿಸಲಾಗುವುದು ಎಂದು ಸಿ.ವಿ.ನಾಗೇಶ್ ಹೇಳಿದ್ದಾರೆ.

ಎಫ್ಐಆರ್ ನಂತರ ತನಿಖೆ ಯಾವಾಗ ಆರಂಭವಾಯಿತು ಎಂದು ಹೈಕೋರ್ಟ್ ಪ್ರಶ್ನಿಸಿದ್ದು, ಮಾರ್ಚ್ 14ರ ಎಫ್ಐಆರ್ ನಂತರ ಏ.12ರಂದು ನೋಟಿಸ್ ನೀಡಿದ್ದಾರೆ. ಅಲ್ಲಿಯವರೆಗೆ ಪೊಲೀಸರು ಏನು ಮಾಡಿದರೆಂಬುದು ತಿಳಿದಿಲ್ಲ ಎಂದು ಸಿ.ವಿ.ನಾಗೇಶ್ ವಾದಿಸಿದ್ದಾರೆ.

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಬಂಧನ ವಾರೆಂಟ್ ನಿನ್ನೆ ವಿಶೇಷ ನ್ಯಾಯಾಲಯ ಹೊರಡಿಸಿತ್ತು. ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ನೋಟಿಸ್ ಕೊಟ್ಟರೂ ಬಿಎಸ್‌ವೈ ವಿಚಾರಣೆಗೆ ಹಾಜರಾಗಲಿಲ್ಲ. ಆದ್ದರಿಂದ ಅವರನ್ನು ಬಂಧಿಸಲು ನಿರ್ದೇಶಿಸಬೇಕು ಎಂದು ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಅಶೋಕ್ ನಾಯಕ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನ್ಯಾಯ ಕೊಡಿಸುವಂತೆ ಕೋರಿ ಬಾಲಕಿ ಮತ್ತು ಆಕೆಯ ತಾಯಿ ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದರು. ಈ ವೇಳೆ ರೇಪ್ ಆಗಿದೆಯೋ ಹೇಗೆ ಎಂಬುದನ್ನು ಚೆಕ್ ಮಾಡುವ ನೆಪದಲ್ಲಿ 17 ವರ್ಷದ ಬಾಲಕಿಯನ್ನು ರೂಮಿನಲ್ಲಿ ಕೂಡಿ ಹಾಕಿಕೊಂಡು ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ  ಬಗ್ಗೆ ಪ್ರಕರಣದ ರದ್ದು ಕೋರಿ ಮಾಜಿ ಸಿಎಂ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ಇದಲ್ಲದೆ ಬಂಧನದ ಭೀತಿ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ದೂರಿನಲ್ಲಿ ಯಾವುದೇ ಅಪರಾಧದ ಅಂಶ ಕಂಡುಬರದ ಹಿನ್ನೆಲೆಯಲ್ಲಿ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು.

ಇನ್ನು ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಬಾಲಕಿಯ ಸಹೋದರನ ಮನವಿ ಮೇರೆಗೆ ವಕೀಲ ಎಸ್‌ ಬಾಲನ್ ಅವರು ಜೂನ್ 10ರಂದು ಅರ್ಜಿ ಸಲ್ಲಿಸಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement