Published
6 months agoon
By
Akkare Newsಪುತ್ತೂರು: ಮೆದುಳಿನ ಕಾಯಿಲೆಯಿಂದ ಬಳಲುತ್ತಿದ್ದ ಪುತ್ತೂರು ನಗರದ ಹೊರವಲಯದ ಪಡೀಲ್‌ನಿವಾಸಿ ವೇದಾವತಿ ಯು ಶೆಟ್ಟಿ ಅವರ ಚಿಕಿತ್ಸೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 5 ಲಕ್ಷ ರೂ ಮಂಜೂರು ಮಾಡಿದ್ದಾರೆ.
ವೇದಾವತಿಯವರಿಗೆ ಮೆದುಳಿನಲ್ಲಿ ಕಾಯಿಲೆ ಕಾಣಿಸಿಕೊಂಡಿದ್ದುಚಿಕಿತ್ಸೆಗೆ ಸುಮಾರು 15 ಲಕ್ಷ ರೂ ಹಣದ ಅವಶ್ಯಕತೆ ಇತ್ತು. ತೀರಾ ಬಡತನದಲ್ಲಿರುವ ಇವರ ಚಿಕಿತ್ಸೆಗೆ ಆರ್ಥಿಕ ನೆರವು ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ಸಿ ಎಂ ಸಿದ್ದರಾಮಯ್ಯ ಅವರು 5 ಲಕ್ಷ ರೂ. ಮಂಜೂರು ಮಾಡಿದ್ದಾರೆ.