ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ಆಂಧ್ರಪ್ರದೇಶ: ಉಪಮುಖ್ಯಮಂತ್ರಿಯಾಗಿ ಪವನ್ ಕಲ್ಯಾಣ್ ನೇಮಕ

Published

on

ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದು, ಇದರ ಜೊತೆಗೆ ಜನಸೇನಾ ಪಕ್ಷದ (ಜೆಎಸ್ಪಿ) ಮುಖ್ಯಸ್ಥ ಪವನ್ ಕಲ್ಯಾಣ್ ಅವರನ್ನು ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿಯಾಗಿ ನೇಮಿಸಿದ್ದಾರೆ.

ಪವನ್ ಕಲ್ಯಾಣ್ ಅವರು ಪರಿಸರ ಮತ್ತು ಅರಣ್ಯ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನದ ಹೆಚ್ಚುವರಿ ಖಾತೆಗಳೊಂದಿಗೆ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾಗಿರುತ್ತಾರೆ. 55 ವರ್ಷದ ನಟ-ರಾಜಕಾರಣಿ ಪವನ್ ಕಲ್ಯಾಣ್ ಇತ್ತೀಚೆಗಷ್ಟೇ ಮುಗಿದ ಚುನಾವಣೆಯಲ್ಲಿ ಪಿಠಾಪುರಂ ವಿಧಾನಸಭಾ ಕ್ಷೇತ್ರದಿಂದ ಗೆಲುವನ್ನು ಸಾಧಿಸಿದ್ದರು.

ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ಜೆ.‍ಪಿ.ನಡ್ಡಾ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಸೇರಿದಂತೆ ಬಿಜೆಪಿ ಮುಖಂಡರು ಭಾಗವಹಿಸಿದ್ದರು. ಇದೇ ವೇಳೆ ಜನಸೇನಾ ಮುಖ್ಯಸ್ಥ, ನಟ ಪವನ್ ಕಲ್ಯಾಣ್  ಸೇರಿದಂತೆ ಹಲವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. 25 ಸದಸ್ಯರ ಸಚಿವ ಸಂಪುಟದಲ್ಲಿ ಪವನ್ ಕಲ್ಯಾಣ್ ಅವರ ನೇತೃತ್ವದ ಜನಸೇನಾದಿಂದ ಮೂವರು ಹಾಗೂ ಬಿಜೆಪಿಯಿಂದ ಒಬ್ಬರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಈ ಮೊದಲು ಜನ ಸೇನಾ ಪಕ್ಷದ ನಾಯಕರೊಬ್ಬರು ಮಾತನಾಡಿ, ಚುನಾವಣೆಗೂ ಮುನ್ನ ಅವರು ಮಾಡಿದ ಕೆಲಸಕ್ಕೆ ಪ್ರತಿಫಲ ಸಿಗುತ್ತದೆ ಎಂದು ನಾವು ಭರವಸೆ ಹೊಂದಿದ್ದೇವೆ ಎಂದು ಹೇಳಿದ್ದರು.

ಚುನಾವಣಾ ಪೂರ್ವ ಮೈತ್ರಿಯಲ್ಲಿ ಬಿಜೆಪಿ ಮತ್ತು ತೆಲುಗು ದೇಶಂ ಪಕ್ಷವನ್ನು ಒಟ್ಟಿಗೆ ತಂದ ಕೀರ್ತಿ ಪವನ್ ಕಲ್ಯಾಣ್ ಅವರದ್ದು, ಉಪಮುಖ್ಯಮಂತ್ರಿ ಹುದ್ದೆಗೆ ಪವನ್ ಕಲ್ಯಾಣ್ ಅರ್ಹರು ಎಂದು ಟಿಡಿಪಿ ಮೂಲಗಳು ತಿಳಿಸಿದ್ದವು.

ಆಂಧ್ರಪ್ರದೇಶಕ್ಕೆ ಗ್ರಾಮಸ್ವರಾಜ್ಯವನ್ನು ತರಲು ಬಯಸುವುದಾಗಿ ಪವನ್ ಕಲ್ಯಾಣ್ ಅವರು ಈ ಹಿಂದೆ ಹೇಳಿದ್ದರು. ಈ ಹಿನ್ನೆಲೆ ಅವರಿಗೆ ನೀಡಲಾಗಿರುವ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಖಾತೆಯಿಂದ ಪವನ್‌ ಕಲ್ಯಾಣ್‌ ಸಂತೋಷಗೊಂಡಿದ್ದಾರೆ ಎಂದು ಜನಸೇನಾ ಪಕ್ಷದ ಮೂಲಗಳು ತಿಳಿಸಿವೆ.

Continue Reading
Click to comment

Leave a Reply

Your email address will not be published. Required fields are marked *

Advertisement