ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಂತರರಾಷ್ಟ್ರೀಯ

ಕುವೈತ್ ಅಗ್ನಿ ದುರಂತ: 45 ಭಾರತೀಯರ ಮೃತದೇಹ ಹೊತ್ತು ಕೊಚ್ಚಿಗೆ ಹೊರಟ ವಿಶೇಷ ವಿಮಾನ

Published

on

ನವದೆಹಲಿ: ಕುವೈತ್ ಕಟ್ಟಡ ಅಗ್ನಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರ ಪಾರ್ಥೀವ ಶರೀರವನ್ನು ಹೊತ್ತ ಭಾರತೀಯ ವಾಯುಪಡೆಯ ವಿಶೇಷ ವಿಮಾನದ ಕುವೈತ್ ನಿಂದ ಶುಕ್ರವಾರ ಮುಂಜಾನೆ ಕೇರಳಕ್ಕೆ ಹೊರಟಿದೆ.

ಈ ವಿಚಾರವನ್ನು ಕೇಂದ್ರ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ‘ಎಕ್ಸ್‌’ ನಲ್ಲಿ ಖಚಿತಪಡಿಸಿದ್ದಾರೆ. ಅಲ್ಲದೆ ವಿಮಾನ ಇಳಿಯಲಿರುವ ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸ್ ಮತ್ತು ಆಂಬ್ಯುಲೆನ್ಸ್‌ಗಳ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಳೆದ ಬುಧವಾರ ಕುವೈತ್ ನ ದಕ್ಷಿಣ ನಗರವಾದ ಮಂಗಾಫ್ ನಗರದ ಆರು ಅಂತಸ್ತಿನ ಕಟ್ಟಡದಲ್ಲಿ ಬುಧವಾರ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 48 ಜನರು ಸಾವನ್ನಪ್ಪಿದ್ದಾರೆ. ವಸತಿ ಸೌಲಭ್ಯದಲ್ಲಿರುವ 176 ಭಾರತೀಯ ಕಾರ್ಮಿಕರಲ್ಲಿ 45 ಮಂದಿ ಸಾವನ್ನಪ್ಪಿದ್ದಾರೆ ಮತ್ತು 33 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ರಾಯಭಾರ ಕಚೇರಿ ತಿಳಿಸಿದೆ. ಉಳಿದವರು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. ಇದಾದ ಬಳಿಕ ಗುರುವಾರ ಕುವೈತ್‌ನ ಅಧಿಕಾರಿಗಳು ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದ 45 ಭಾರತೀಯರು ಮತ್ತು ಮೂವರು ಫಿಲಿಪಿನೋ ಪ್ರಜೆಗಳ ಶವಗಳನ್ನು ಗುರುತಿಸಿದ್ದಾರೆ. ಘಟನೆಯ ಕುರಿತು ತ್ವರಿತವಾಗಿ ತನಿಖೆ ನಡೆಸುವುದಾಗಿ ಕುವೈತ್ ಪ್ರತಿಜ್ಞೆ ಮಾಡಿದೆ ಮತ್ತು ಸಂತ್ರಸ್ತರ ಪಾರ್ಥಿವ ಶರೀರವನ್ನು ಸ್ವದೇಶಕ್ಕೆ ತರಲು ಸಂಪೂರ್ಣ ಬೆಂಬಲವನ್ನು ಭರವಸೆ ನೀಡಿತ್ತು.

ಮೃತರಲ್ಲಿ ಕೇರಳದ 23, ತಮಿಳುನಾಡಿನ ಏಳು, ಉತ್ತರ ಪ್ರದೇಶದ ಮೂವರು, ಒಡಿಶಾದ ಇಬ್ಬರು ಮತ್ತು ಬಿಹಾರ, ಪಂಜಾಬ್, ಕರ್ನಾಟಕ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಹರಿಯಾಣದಿಂದ ತಲಾ ಒಬ್ಬರು ಸೇರಿದ್ದಾರೆ.

ಘಟನೆ ಸಂಭವಿಸಿದ ದಿನವೇ ಕೇಂದ್ರ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ಕುವೈತ್ ಗೆ ತೆರಳಿ ಗಾಯಗೊಂಡಿರುವ ಭಾರತೀಯರ ಆರೋಗ್ಯವನ್ನು ವಿಚಾರಿಸಿದ್ದಾರೆ ಅಲ್ಲದೆ ಕುವೈತ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಮೃತಪಟ್ಟಿರುವ ಭಾರತೀಯರ ದೇಹಗಳನ್ನು ಭಾರತಕ್ಕೆ ಕಳುಹಿಸಕೊಡುವ ಪ್ರಕ್ರಿಯೆಯನ್ನು ನಡೆಸಿದ್ದಾರೆ, ಇದರ ಬೆನ್ನಲ್ಲೇ ಭಾರತೀಯರ ಮೃತದೇಹವನ್ನು ತರಲು ಕೇಂದ್ರ ಸರಕಾರ ಭಾರತೀಯ ವಾಯುಪಡೆಯ ವಿಶೇಷ ವಿಮಾನವನ್ನು ಕಳುಹಿಸಿಕೊಟ್ಟಿದ್ದು ಇಂದು( ಶುಕ್ರವಾರ) ನಲವತ್ತೈದು ಭಾರತೀಯರ ಮೃತದೇಹವನ್ನು ಹೊತ್ತ ವಿಶೇಷ ವಿಮಾನ ಕುವೈತ್ ನಿಂದ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಹಾರಾಟ ನಡೆಸಿದ್ದು ಮಧ್ಯಾಹ್ನ ಕೊಚ್ಚಿಗೆ ತಲುಪುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement