Published
6 months agoon
By
Akkare Newsಮಂಗಳೂರು: ದ.ಕ ಜಿಲ್ಲೆಯ ಮಸೀದಿಗಳಲ್ಲಿ ಅಕ್ರಮ ಶಸ್ತ್ರಾಸ್ತ್ರ ಶೇಕರಣೆ ಹೇಳಿಕೆಯ ಮೂಲಕ ಶಾಸಕ ಹರೀಶ್ ಪೂಂಜಾ ಜಿಲ್ಲೆಯ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸುರತ್ಕಲ್ ವಲಯ ಎಸ್ಕೆಎಸ್ಸೆಸ್ಸೆಫ್ ತೀವ್ರವಾಗಿ ಖಂಡಿಸಿದೆ.
ಸದಾ ಒಂದಿಲ್ಲೊಂದು ವಿಷಯಗಳ ಮೂಲಕ ಸಮಾಜದ ಒಂದು ವಿಭಾಗವನ್ನು ನಿಂದಿಸುತ್ತಾ ಇಲ್ಲ ಸಲ್ಲದ ಆರೋಪಗಳನ್ನು ಮಾಡುವ ಶಾಸಕ ಪೂಂಜಾ, ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಕದಡುವ ಉದ್ರೇಕಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಕಾಯುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮಾನ್ಯ ಪೋಲಿಸ್ ಆಯುಕ್ತರು ಕೂಡಲೇ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಅದು ಆಗ್ರಹಿಸಿದೆ.
ಬಕ್ರೀದ್ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸುರತ್ಕಲ್ ವಲಯ ಎಸ್ಕೆಎಸ್ಸೆಸ್ಸೆಫ್ ಪತ್ರಿಕಾ ಪ್ರಕಟಣೆಯಲ್ಲಿ ಪೊಲೀಸ್ ಆಯುಕ್ತರನ್ನು ಆಗ್ರಹಿಸಿದೆ.