Published
6 months agoon
By
Akkare Newsಶೀರ್ಘದಲ್ಲೇ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯಿತಿಗಳ ಚುನಾವಣೆಯನ್ನು ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
“ನಮ್ಮ ಮೇಲೆ ಡಿ ಕೆ ಶಿವಕುಮಾರ್, ರಾಹುಲ್ ಗಾಂಧಿ ಅವರ ಮೇಲೆ ಕೇಸು ಹಾಕಿರುವುದನ್ನು ಏನೆಂದು ಕರೆಯಬೇಕು. ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನೇ ರದ್ದುಗೊಳಿಸಿದ್ದನ್ನು ಏನೆಂದು ಕರೆಯುವುದು? ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿಗೆ ಕಲಿಸಿದ್ದನ್ನು ಏನೆಂದು ಕರೆಯಬೇಕು? ಇದೆಲ್ಲವನ್ನು ದ್ವೇಷದ ರಾಜಕಾರಣ ಅನ್ನದೇ ಪ್ರೀತಿಯ ರಾಜಕಾರಣ ಎಂದು ಕರೆಯಬೇಕಾ?” ಎಂದು ತಿರುಗೇಟು ನೀಡಿದರು.
ದಕ್ಷಿಣ ಭಾರತದಲ್ಲಿ ಜನ ಬಿಜೆಪಿಯನ್ನು ಬೆಂಬಲಿಸುವುದಿಲ್ಲ
ದಕ್ಷಿಣ ಭಾರತದ ಏಳು ಜನರು ಕೇಂದ್ರದಲ್ಲಿ ಸಚಿವರಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ದಕ್ಷಿಣ ಭಾರತದಲ್ಲಿ ಏನು ಮಾಡಿದರು ಬಿಜೆಪಿಯನ್ನು ಜನ ಬೆಂಬಲಿಸುವುದಿಲ್ಲ. ಏಕೆಂದರೆ ಆರ್.ಎಸ್.ಎಸ್ ನಾ ರಾಜಕೀಯ ಮುಖವಾಡ ಅದು ಹಾಗಾಗಿ ಉತ್ತರ ಭಾರತದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಆರ್.ಎಸ್.ಎಸ್ ನ ಮುಖ್ಯಸ್ಥರು ಅಹಂಕಾರಕ್ಕೆ ಜನ ಸರಿಯಾದ ಪಾಠ ಕಲಿಸಿದ್ದಾರೆ ಎಂದು ಹೇಳಿದ್ದಾರೆ” ಎಂದರು.
ನೀಟ್: ಮರುಪರೀಕ್ಷೆಗೆ ಆಗ್ರಹ
“ನೀಟ್ ಪರೀಕ್ಷೆಯಲ್ಲಿ ಕೆಲವು ರ‍್ಯಾಂಕ್ ನೀಡುವುದರಲ್ಲಿ ಹಾಗೂ ಅಭ್ಯಾಸ ಮಾಡಿ ಬರೆದ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗಿದೆ ಅನ್ಯಾಯವಾಗಿದೆ. ಈ ಬಗ್ಗೆ ತನಿಖೆಯಾಗಬೇಕು ಹಾಗೂ ಮರುಪರೀಕ್ಷೆಯಾಗಬೇಕು. ಕೃಪಾಂಕ ಕೊಟ್ಟು ಉತ್ತೀರ್ಣ ಮಾಡುವುದು ಕೆಟ್ಟ ಅಭ್ಯಾಸ. ಎನ್ . ಟಿ .ಎ ಪರೀಕ್ಷೆಯನ್ನು ಸರಿಯಾಗಿ ಮಾಡದೇ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.