Published
6 months agoon
By
Akkare Newsಸುಳ್ಯ : ಪಂಜ ಮೆಸ್ಕಾಂ ಶಾಖಾ ವ್ಯಾಪ್ತಿಯ ಅಲೆಕ್ಕಾಡಿ ಸಮೀಪದ ಪಿಜಾವು ಎಂಬಲ್ಲಿ ವಿದ್ಯುತ್ ಕಂಬದಲ್ಲಿ ಕಾಮಗಾರಿ ನಡೆಯುತ್ತಿದ್ದ ವೇಳೆ ಕಾರ್ಮಿಕರೊಬ್ಬರು ಬಿದ್ದು ಮೃತಪಟ್ಟ ಘಟನೆ ಜೂ.17ರಂದು ನಡೆದಿದೆ.
ಕಂಬದಿಂದ ಬಿದ್ದು ಬೆಳ್ತಂಗಡಿ ತಾಲೂಕಿನ ಮುಗೇರಡ್ಕ ನಿವಾಸಿ ಪ್ರಕಾಶ್(29) ಎಂಬವರು ಮೃತಪಟ್ಟವರು. ಗುತ್ತಿಗೆದಾರರ ಅಡಿಯಲ್ಲಿ ಲೈನ್ ಕಾರ್ಮಿಕರು ವಿದ್ಯುತ್ ಲೈನ್ ಕೆಲಸ ನಿರ್ವಹಿಸುತ್ತಿದ್ದರೆನ್ನಲಾಗಿದೆ. ಕಂಬ ಏರಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಪೈಕಿ ಪ್ರಕಾಶ್ ಕಂಬದಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರ ಕೊಠಡಿಯಲ್ಲಿ ಇರಿಸಲಾಗಿದೆ. ಕಾಮಗಾರಿ ನಡೆಯುತ್ತಿದ್ದ ಸಂದರ್ಭ ವಿದ್ಯುತ್ ಆಫ್ ಆಗಿತ್ತು. ಆದರೆ ವಿದ್ಯುತ್ ಶಾಕ್ ನಿಂದ ಬಿದ್ದಿರುವ ಸಾಧ್ಯತೆ ಇದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಎಂದು ತಿಳಿದು ಬಂದಿದೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.