Published
6 months agoon
By
Akkare Newsಹೊಸದಿಲ್ಲಿ: ಸೋಮವಾರ ಕಾಂಗ್ರೆಸ್ ಪಕ್ಷವು ಎರಡು ಪ್ರಮುಖ ಪ್ರಕಟಣೆಗಳನ್ನು ಹೊರಡಿಸಿದ್ದು, ರಾಹುಲ್ ಗಾಂಧಿ ಕೇರಳದಲ್ಲಿನ ವಯನಾಡ್ ಲೋಕಸಭಾ ಕ್ಷೇತ್ರವನ್ನು ತೆರವುಗೊಳಿಸಲಿದ್ದು, ಉತ್ತರ ಪ್ರದೇಶದಲ್ಲಿನ ತಮ್ಮ ಕುಟುಂಬದ ಭದ್ರಕೋಟೆಯಾದ ರಾಯ್ ಬರೇಲಿಯನ್ನು ಉಳಿಸಿಕೊಳ್ಳಲಿದ್ದಾರೆ.
ರಾಹುಲ್ ಗಾಂಧಿ ತೆರವುಗೊಳಿಸಲಿರುವ ವಯನಾಡ್ ಲೋಕಸಭಾ ಕ್ಷೇತ್ರದಿಂದ ಅವರ ಸಹೋದರಿಯಾದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸಲಿದ್ದಾರೆ. ಈ ಮೂಲಕ ಅವರು ಕೊನೆಗೂ ಚುನಾವಣಾ ರಾಜಕಾರಣಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.