ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಮಾಹಿತಿ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ.ಆರ್ಹ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುವಂತೆ : ಶಾಸಕರಾದ ಅಶೋಕ್ ಕುಮಾರ್ ರೈ ವಿನಂತಿ

Published

on

ಪುತ್ತೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು ( 6 ರಿಂದ 10 ನೇ ತರಗತಿ) ಗಳಿಗೆ ವಾರ್ಷಿಕ ರೂ.ಹತ್ತು ಸಾವಿರದಂತೆ ದಂತೆ ಪ್ರೊತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು.

ಅರ್ಜಿದಾರರು 2023-24 ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು 6 ನೇ ರಿಂದ 10 ನೇ ತರಗತಿಯಲ್ಲಿ ಓದುತ್ತಿರಬೇಕು.ರಾಜ್ಯ ಕ್ರೀಡಾ ಪ್ರಾಧಿಕಾರದಿಂದ ನೊಂದಯಿತವಾದ ಕ್ರೀಡಾ ಸಂಸ್ಥೆಗಳು ದಿನಾಂಕ 1-04-2023 ರಿಂದ 31-03-2024 ರವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಅಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸರಬೇಕು.

ಅಂದರೆ ದಿನಾಂಕ 1-04-2023 ರಿಂದ 31-03-2024 ರ ಅವಧಿಯಲ್ಲಿ ನಡೆದ ಕ್ರೀಡಾಕೂಟಗಳಲ್ಲಿನ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುವುದು.ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.

ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿ ವೇತನ ಮೊತ್ತಕ್ಕೆ ಮಾತ್ರ ಅರ್ಹರಾಗಿರುತ್ತಾರೆ.ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಹರು ಇರುವ ಕ್ರೀಡಾಪಟುಗಳು http://sevasindhuservices.karnataka.gov in ಮೂಲಕ ಆನ್ ಲೈನ್ ನಲ್ಲಿ ದಿನಾಂಕ 30-06-2024 ಅರ್ಜಿಗಳನ್ನು ಸಲ್ಲಿಸುವಂತೆ ಪುತ್ತೂರು ತಾಲ್ಲೂಕು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೇಲ್ವಿಚಾರಕರಾದ ಶ್ರೀಕಾಂತ್ ಪೂಜಾರಿ ಬಿರಾವು ಪ್ರಕಟಣೆ ನೀಡಿದ್ದಾರೆ ಹೆಚ್ಚಿನ ಮಾಹಿತಿಗಾಗಿ 9164502107 ನಂಬರನ್ನು ಸಂಪರ್ಕಿಸಬಹುದಾಗಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version