Published
6 months agoon
By
Akkare Newsಜೂ.17 : ಬಿಜೆಪಿಯ ಹಿರಿಯ ನಾಯಕ, ವಿಧಾನ ಪರಿಷತ್ ನ ಮಾಜಿ ಸದಸ್ಯ ಭಾನುಪ್ರಕಾಶ್‌ರವರು ಇಂದು ನಿಧನರಾದರು.
ಕಾಂಗ್ರೆಸ್ ವಿರುದ್ಧ ಬೆಲೆ ಏರಿಕೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಹಿರಿಯ ಮುಖಂಡ ಭಾನುಪ್ರಕಾಶ್ ರವರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಭಾನುಪ್ರಕಾಶ್ ಬಿಜೆಪಿಯ ಹಿರಿಯ ಮುಖಂಡ. ಸರಳ, ಸಜ್ಜನ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರವಾದವರು ಹಾಗೂ ಸತ್ಯ, ನ್ಯಾಯ, ನಿಷ್ಠೆಯ ಪರವಾಗಿ ಮಾತನಾಡುವ ಉತ್ತಮ ವಾಗ್ನಿಯಾಗಿದ್ದರು.
ಗಾಜನೂರು ಜಿ.ಪಂ. ಕ್ಷೇತ್ರದಿಂದ ಆಯ್ಕೆಯಾಗಿದ್ದ ಭಾನುಪ್ರಕಾಶ್ 2001ರಿಂದ 2005ರ ಅವಧಿಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದರು. ಬಳಿಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು.
ಇಂದು ಸಂಜೆ 4.30 ಕ್ಕೆ ನಡೆಯಬೇಕಾಗಿದ್ದ ವಾಹನ ಜಾಥಾ ಹಾಗೂ ಅಭಿನಂದನಾ ಕಾರ್ಯಕ್ರಮವನ್ನು ಎಂ.ಎಲ್.ಸಿ ಭಾನುಪ್ರಕಾಶ್ ನಿಧನದ ಹಿನ್ನೆಲೆ ಮುಂದೂಡಲಾಗಿದೆ.