Published
6 months agoon
By
Akkare Newsಬೆಂಗಳೂರು: ಕೆ.ಆರ್. ನಗರ ಮಹಿಳೆ ಅಪಹರಣ ಪ್ರಕರಣದ ಆರೋಪ ಎದುರಿಸುತ್ತಿದ್ದ ಭವಾನಿ ರೇವಣ್ಣಗೆಕೊನೆಗೂ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಹೈಕೋರ್ಟ್ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡುವುದರೊಂದಿಗೆ ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಪೊಲೀಸರ 85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಅವರು ಉತ್ತರಿಸಿದ್ದರಿಂದ ತನಿಖೆಗೆ ಸಹಕರಿಸಿಲ್ಲ ಎಂಬ ವಾದ ಒಪ್ಪಲು ಸಾಧ್ಯವಿಲ್ಲ.
ಭವಾನಿ ರೇವಣ್ಣ ಅವರು ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ. ಸಂತ್ರಸ್ತೆಗೆ ಊಟ ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನು ಒಪ್ಪಲಾಗುವುದಿಲ್ಲ. ಭವಾನಿ ರೇವಣ್ಣ ಬಟ್ಟೆ ಊಟ ಕಳುಹಿಸಿದ್ದರೆಂದು ಸಂತ್ರಸ್ತೆ ಹೇಳಿಕೆಯಿದೆ ಎಂದು ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ತಿಳಿಸಿದೆ.