Published
6 months agoon
By
Akkare Newsಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಎಂಬವರು ರವಿವಾರ ತಡ ರಾತ್ರಿ ಮೃತಪಟ್ಟಿದ್ದು, ಇದೊಂದು ಕೊಲೆ ಕೃತ್ಯ ಎಂದು ತೀರ್ಮಾನಕ್ಕೆ ಬಂದಿರುವ ಪೊಲೀಸರು ಆರೋಪಿ ಬಾಲಕನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಹೇಮಾವತಿ ಅವರ ಮನೆಯಲ್ಲಿ ರಾತ್ರಿ ತಂಗಿದ್ದ ಅವರ ಅಕ್ಕನ ಮಗ, ಹತ್ತನೇ ತರಗತಿಯ ವಿದ್ಯಾರ್ಥಿ, ಅಪ್ರಾಪ್ತ ಬಾಲಕ ಹೇಮಾವತಿ ಮಲಗಿದಲ್ಲಿಗೆ ಹೋಗಿ ದೇಹ ಸುಖ ಬಯಸಿದ್ದು, ಇದಕ್ಕೆ ಹೇಮಾವತಿ ಪ್ರತಿರೋಧ ವ್ಯಕ್ತಪಡಿಸಿದ್ದು, ಈ ವೇಳೆ ಆರೋಪಿ ಬಾಲಕ ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ತನಿಖೆ ವೇಳೆ ಬಾಲಕ ಬಾಯಿ ಬಿಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮೃತ ಹೇಮಾವತಿ ಅವರ ಪತಿ ವಿಠಲ ಪೈ ಅವರ ದೂರಿನ ಮೇರೆಗೆ ಆರೋಪಿ ಬಾಲಕನನ್ನು ವಿಚಾರಣೆಗೆ ಒಳಪಡಿಸಿದ್ದು, ಆತನೇ ಕೊಲೆ ಮಾಡಿರುವುದು ಸಾಬೀತಾಗಿದೆ. ಹೀಗಾಗಿ ಅಪ್ರಾಪ್ತ ಬಾಲಕನನ್ನು ಬಂಧಿಸಿ ಆತನ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಕರಣದ ತನಿಖಾಧಿಕಾರಿ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಇನ್ಸ್‌ಪೆಕ್ಟರ್ ರವಿ ಬಿ.ಎಸ್. ತಿಳಿಸಿದ್ದಾರೆ.