Published
6 months agoon
By
Akkare Newsಬೆಂಗಳೂರು:- ವಿಧಾನಸೌಧದ ಮುಂಭಾಗ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಗಣ್ಯರು ಯೋಗಾಸನ ಮಾಡುವ ಮೂಲಕ ಗಮನ ಸೆಳೆದರು.
TA ಶರವಣ : ವಿಧಾನಸೌಧದಲ್ಲಿ ‘ಯೋಗೋತ್ಸವ’ ಕಾರ್ಯಕ್ರಮ.. ಪರಿಷತ್ ಸದಸ್ಯ ಶರವಣ ಭಾಗಿ..!
10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಕಾರ್ಯಕ್ರಮ ಜರುಗಿದೆ. ಕರ್ನಾಟಕ ಸರ್ಕಾರದ ವತಿಯಿಂದ ವಿಧಾನಸೌಧದ ಎದುರು ಆಯೋಜಿಸಿದ್ದ ʻಯೋಗೋತ್ಸವʼ ಕಾರ್ಯಕ್ರಮದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ರಾಜ್ಯಾಪಾಲ ಥಾವರ್ ಚಂದ್ ಗೆಹ್ಲೋಟ್ ಸಚಿವರಾದ ದಿನೇಶ್ ಗುಂಡೂರಾವ್, ಸಭಾಪತಿ ಬಸವರಾಜ ಹೊರಟ್ಟಿ, ನಟಿ ಅನು ಪ್ರಭಾಕರ್, ನಟ ಶರಣ್, ಅಶ್ವಿನಿ ನಾಚಪ್ಪ, ಟೀಂ ಇಂಡಿಯಾ ಕ್ರಿಕೆಟಿಗ ಮನೀಷ್ ಪಾಂಡೆ ಸಹ ಪಾಲ್ಗೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ನೂರಾರು ಸಾರ್ವಜನಿಕರು, ವಿವಿಧ ಶಾಲಾ ಕಾಲೇಜು ಮಕ್ಕಳು ಪಾಲ್ಗೊಡಿದ್ದು, ಯೋಗ ಪ್ರದರ್ಶಿಸಿ ಆರೋಗ್ಯ ಸುರಕ್ಷತೆಗಳ ಬಗ್ಗೆ ಜಾಗೃತಿ ಮೂಡಿಸಿದರು.
ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಡಿಕೆ.ಶಿವಕುಮಾರ್ ಅವರು, ‘ರೋಗ್ಯಕರ ಮನಸ್ಸು ಆರೋಗ್ಯಕರ ದೇಹದಲ್ಲಿ ನೆಲೆಸುತ್ತದೆ ಎಂಬ ಗಾದೆಯಂತೆ, ಯೋಗವು ದೇಹ, ಮನಸ್ಸು ಮತ್ತು ಚೈತನ್ಯವನ್ನು ಆರೋಗ್ಯವಾಗಿಟ್ಟುಕೊಳ್ಳಲು ಉತ್ತಮ ಮಾರ್ಗವಾಗಿದೆ. ಅಂತರಾಷ್ಟ್ರೀಯ ಯೋಗ ದಿನದ ಈ ಸಂದರ್ಭದಲ್ಲಿ ಯೋಗವನ್ನು ನಮ್ಮ ದಿನಚರಿಯಲ್ಲಿ ಅಳವಡಿಸಿಕೊಳ್ಳುವ ಮೂಲಕ ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಒಟ್ಟಾಗಿ ಶ್ರಮಿಸೋಣ ಎಂದು ಹೇಳಿದ್ದಾರೆ.