Published
6 months agoon
By
Akkare Newsಬೆಂಗಳೂರು: ವಾಹನ ಸವಾರರಿಗೆ ಮತ್ತೊಮ್ಮೆ ಬಿಗ್ ರಿಲೀಫ್ ಸಿಕ್ಕಿದೆ. ಇನ್ನೂ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನಗಳಿಗೆ ರಾಜ್ಯ ಸರ್ಕಾರ ಗಡುವು ವಿಸ್ತರಣೆ ಮಾಡಲು ಮುಂದಾಗಿದೆ. ಆದರೆ, HSRP ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೊಮ್ಮೆ ಡೆಡ್‌ಲೈನ್ ಅವಧಿ ವಿಸ್ತರಣೆ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸ್ಪಷ್ಟಪಡಿಸಿದ್ದಾರೆ.
HSRP ನಂಬರ್ ಪ್ಲೇಟ್ ಅಳವಡಿಕೆಗೆ ನೀಡಿದ್ದ ಗಡುವು ಅಂತ್ಯವಾದ ಹಿನ್ನೆಲೆಯಲ್ಲಿ ಮುಂದಿನ ಸೆಪ್ಟೆಂಬರ್ 15ರವರೆಗೆ ಡೆಡ್‌ಲೈನ್ ನೀಡಲಾಗಿದೆ. ಇನ್ನು ಮೂರು ತಿಂಗಳ ಕಾಲ HSRP ನಂಬರ್ ಪ್ಲೇಟ್ ಅಳವಡಿಕೆಗೆ ಡೆಡ್‌ಲೈನ್ ನೀಡಲಾಗಿದ್ದು, ಸೆಪ್ಟೆಂಬರ್ 15ರ ಬಳಿಕ ವಿಸ್ತರಣೆ ಮಾಡವುದಿಲ್ಲ ಎನ್ನಲಾಗಿದೆ.
ಈಗಾಗಲೇ ಹಲವು ಬಾರಿ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಣೆ ಮಾಡಿದ್ದೇವೆ. ಮತ್ತೆ ಗಡುವು ವಿಸ್ತರಣೆ ಮಾಡಲ್ಲ. ಸೆಪ್ಟೆಂಬರ್ 15ರೊಳಗೆ ಎಲ್ಲಾ ವಾಹನಗಳಿಗೂ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಿ. ಶೀಘ್ರದಲ್ಲೇ ಈ ಗಡುವು ವಿಸ್ತರಣೆ ಬಗ್ಗೆ ಆದೇಶ ಹೊರಡಿಸಲಾಗ್ತದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳಿದ್ದಾರೆ.