Published
6 months agoon
By
Akkare Newsಕೊಡಗಿನ ಪ್ರಕೃತಿ ಸೌಂದರ್ಯ ಸವಿಯಲು ಹೋಗಿದ್ದ ಪ್ರವಾಸಿಗರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಸೋಮವಾರಪೇಟೆ ತಾಲ್ಲೂಕಿನ ಕೋಟೆಬೆಟ್ಟ ರಸ್ತೆಯಲ್ಲಿ ನಡೆದಿದೆ. ಪುತ್ತೂರಿನಿಂದ ಆಗಮಿಸಿದ್ದ ಕುಟುಂಬವೊಂದಕ್ಕೆ ಬೈಕ್‌ನಲ್ಲಿ ಆಗಮಿಸಿದ್ದ ಇಬ್ಬರು ಮನಸ್ಸಿಗೆ ಬಂದಂತೆ ಥಳಿಸಿದ್ದಾರೆ.
ಕೊಡಗು ಜಿಲ್ಲೆಯ ಸೋಮವಾರಪೇಟೆಯ ಕೋಟಬೆಟ್ಟಕ್ಕೆ ಕುಟುಂಬ ಸಮೇತ ಪ್ರವಾಸಕ್ಕೆ ಬಂದಿದ್ದವರ ಮೇಲೆ ಬೈಕ್ ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಗಲಾಟೆ ಮಾಡಿ, ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ರಸ್ತೆಯಲ್ಲಿ ವಾಹನ ಹೋಗವ ವಿಚಾರಕ್ಕೆ ಗಲಾಟೆ ಶುರು ಮಾಡಿದ್ದು, ನಂತರ ಹೆಲೈಟ್‌ನಿಂದ ಹಲ್ಲೆ ಮಾಡಿದ್ದಾರೆ. ಈ ದೃಶ್ಯಗಳು ಮೊಬೈಲ್ ನಲ್ಲಿ ಸೆರೆಯಾಗಿದ್ದು, ಮಕ್ಕಳು, ಮಹಿಳೆಯರು ಭಯದಿಂದ ಚೀರಾಡುತ್ತಿರುವುದು ಕಾಣಿಸುತ್ತಿದೆ.
ಇಬ್ಬರು ಆರೋಪಿಗಳು ಹಲ್ಲೆ ಮಾಡಿದ್ದಲ್ಲದೇ ಪ್ರವಾಸಿಗರ ಚಿನ್ನದ ಸರವನ್ನು ಎಗರಿಸಿ ಬೈಕನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಈ ಘಟನೆ ನೋಡಿ ಪ್ರವಾಸಿಗರು ಭಯಭೀತರಾಗಿದ್ದಾರೆ. ದೌರ್ಜನ್ಯಕ್ಕೆ ಒಳಗಾದವರು ಮಾದಾಪುರ ಉಪ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ.