Published
6 months agoon
By
Akkare Newsದಕ್ಷಿಣ ಕನ್ನಡ //ಮಂಗಳೂರು//ನಾಡಲ್ಲಿ ಮತ್ತೆ ಮಳೆಯ ಅಬ್ಬರ ಶುರುವಾಗಿದ್ದು, ವರಣ ದೇವ ಭರ್ಜರಿ ಮಳೆಯ ಸುರಿಸುತ್ತಿದ್ದಾನೆ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಅಬ್ಬರಿಸುತ್ತಿದ್ದು, ಹೀಗೆಯೇ ಮುಂದಿನ ಕೆಲವು ದಿನಗಳ ಕಾಲ ವರುಣ ದೇವ ಹಿಂಗೆ ಸೌಂಡ್ ಮಾಡಲಿದ್ದಾನೆ ಎಂಬ ಬಗ್ಗೆ ಮುನ್ನೆಚ್ಚರಿಕೆ ಸಂದೇಶ ರವಾನಿಸಲಾಗಿದೆ.
ಹಾಗಾದ್ರೆ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿ ಇರಲಿದೆ? ಬನ್ನಿ ತಿಳಿಯೋಣ.
ಮುಂಗಾರು ಮಳೆ ಬರಲಿ, ಕೃಷಿ ಚಟುವಟಿಕೆ ಕೈಗೊಳ್ಳುವ ಎಂದು ಕಾಯುತ್ತಿದ್ದ ಕರ್ನಾಟಕ ರಾಜ್ಯದ ರೈತರಿಗೆ ಸಿಹಿಸುದ್ದಿ ಸಿಕ್ಕಿದೆ. ಅದ್ರಲ್ಲೂ ಕರ್ನಾಟಕ ರಾಜ್ಯದಲ್ಲಿ ಭರ್ಜರಿ ಮುಂಗಾರು ಮಳೆ ಬೀಳುತ್ತಿದ್ದು, ಬೆಂಗಳೂರು ಸೇರಿದಂತೆ ಕರ್ನಾಟಕದ ಮಲೆನಾಡು ಭಾಗ & ಕರಾವಳಿಗೆ ಕೂಡ ಮುಂಗಾರು ಮಳೆ ಭರ್ಜರಿ ಎಂಟ್ರಿ ಕೊಟ್ಟಿದೆ. ಹೀಗಿದ್ದಾಗ ಮುಂದಿನ ಕೆಲವು ದಿನಗಳ ಕಾಲ ಇದೇ ರೀತಿ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದೆ. ಈ ಬಗ್ಗೆ ಮಾಹಿತಿ ತಿಳಿಯಲು ಮುಂದೆ ಓದಿ.
ಮಳೆ ಅಬ್ಬರ ಯಾವಾಗ ಶುರು?
ಕರ್ನಾಟಕದಲ್ಲಿ ತುಂತುರು ಮಳೆ, ಗುಡುಗು, ಮಿಂಚು & ಬಿರುಗಾಳಿ ಸಹಿತ ಮಳೆ ಬೀಳಲಿದೆ. ಈ ಮೂಲಕ ವ್ಯಾಪಕ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ವರದಿ ಹೇಳಿದೆ ಜೂನ್ 23 ರಿಂದ 6 ದಿನ ಕಾಲ ಕರ್ನಾಟಕದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುವ, ಜೂನ್ 22 ರಿಂದ 28 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ, ಮಲೆನಾಡು ಪ್ರದೇಶದಲ್ಲಿ ಕೂಡ ಮಳೆಯ ಅಬ್ಬರ ಇರುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಹೀಗೆ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ, ಭಾರಿ ಮಳೆಯ ಬಗ್ಗೆ ಮುನ್ನೆಚ್ಚರಿಕೆ ವಹಿಸಲು ಮಾಹಿತಿ ನೀಡಿದೆ.
ಕೈ ಕೊಟ್ಟ ಮುಂಗಾರು: ಕೊಡಗಿನಲ್ಲಿ ವಾಡಿಕೆಗಿಂತ ಶೇ.11 ರಷ್ಟು ಮಳೆ ಕಡಿಮೆ
ಕರ್ನಾಟಕದ ಈ ಜಿಲ್ಲೆಗಳಿಗೆ ಮಳೆ!
ರಾಜಧಾನಿ ಬೆಂಗಳೂರು ಸೇರಿದಂತೆ ವಿಜಯಪುರ & ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್, ಬಾಗಲಕೋಟೆ, ಬೆಳಗಾವಿ & ಬಳ್ಳಾರಿ, ಕೊಪ್ಪಳ, ಧಾರವಾಡ, ಗದಗ ಜಿಲ್ಲೆಗಳಲ್ಲೂ ಮಳೆ ಅಬ್ಬರಿಸಲಿದೆ. ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಮಳೆ ಭರ್ಜರಿ ಅಬ್ಬರ ತೋರಿಸಲಿದ್ದು, ಹೀಗಾಗಿ ಉಡುಪಿ & ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಎಚ್ಚರಿಕೆ ವಹಿಸಲು ತಿಳಿಸಲಾಗಿದೆ. ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ಸೇರಿ ಉಡುಪಿ, ಚಾಮರಾಜನಗರ, ಮಂಡ್ಯ, ಮಂಗಳೂರು, ಉತ್ತರ ಕನ್ನಡ, ತುಮಕೂರು, ಹಾಸನ ಜಿಲ್ಲೆಯ ಬಹುತೇಕ ಭಾಗದಲ್ಲಿ ಭರ್ಜರಿ ಮಳೆ ಆಗಲಿದೆ. ಈ ಮೂಲಕ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುವುದು ಗ್ಯಾರಂಟಿ ಆಗಿದೆ.