ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಬೆಳಗ್ಗೆ 9:15 ರೊಳಗೆ ಕಚೇರಿಗೆ ಬರದಿದ್ದರೆ ಅರ್ಧ ಸಂಬಳ ಕಟ್ –ಕೇಂದ್ರ ಸರ್ಕಾರಿ ನೌಕರರಿಗೆ ಎಚ್ಚರಿಕೆ !

Published

on

Biometric Punch: ಕಚೇರಿ ಶುರುವಾಗುವ ಸರಿಯಾದ ಸಮಯಕ್ಕೆ ಆಗಮಿಸದ ಅಧಿಕಾರಿಗಳ ವಿರುದ್ಧ ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DoPT) ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಈಗ ಗರಿಷ್ಠ 15 ನಿಮಿಷಗಳ ವಿಳಂಬವನ್ನು ಕ್ಷಮಿಸಲು ನಿರ್ಧರಿಸಿದ್ದು, ದೇಶಾದ್ಯಂತ ಕೇಂದ್ರ ಸರ್ಕಾರದ ಉದ್ಯೋಗಿಗಳು (Government Employees duty) ಇನ್ನು ಮುಂದೆ ಬೆಳಗ್ಗೆ 9.15ಕ್ಕೆ ಕಚೇರಿಗೆ ಹಾಜರಾಗಿ, ಹಾಜರಾತಿಯನ್ನು ದಾಖಲಿಸಲು ಸುತ್ತೊಲೆಯಲ್ಲಿ ತಿಳಿಸಲಾಗಿದೆ.

 

ಕೇಂದ್ರ ಸರ್ಕಾರಿ ಕಚೇರಿಗಳು ಬೆಳಗ್ಗೆ 9 ರಿಂದ ಸಂಜೆ 5.30 ಗಂಟೆವರೆಗೆ ತೆರೆದಿರುತ್ತವೆ. ಆದರೆ ಈಗ ಕಿರಿಯ ಹಂತದ ಉದ್ಯೋಗಿಗಳು ತಡವಾಗಿ ಬರುವುದು ಮತ್ತು ಬೇಗನೆ ಹೊರಡುವುದು ಸಹಜವಾಗಿದೆ. ಇದರಿಂದ ಸಾರ್ವಜನಿಕ ಕೆಲಸಗಳು ಸೇರಿದಂತೆ, ಜನರಿಗೆ ಅನಾನುಕೂಲವಾಗಿದೆ. ಈ ಹಿನ್ನೆಲೆಯಲ್ಲಿ ಹಾಜರಾತಿಯನ್ನು ಕಡ್ಡಾಯಗೊಳಿಸಿದೆ ಎಂದು ತಿಳಿಸಲಾಗಿದೆ.

 

ಕೋವಿಡ್ ರೋಗ ಹಬ್ಬಿದ ಬಳಿಕ ಕೇಂದ್ರ ಸರ್ಕಾರದ ನೌಕರರು ಬಯೋಮೆಟ್ರಿಕ್ (Biometric) ಬಳಕೆ ಮಾಡುತ್ತಿಲ್ಲ. ಇನ್ನು ಮುಂದಿನ ದಿನಗಳಲ್ಲಿ ಕಡ್ಡಾಯವಾಗಿ ಹಿರಿಯ ಅಧಿಕಾರಿಗಳು ಸಹಿತ ಎಲ್ಲರೂ ಬಯೋ ಮೆಟ್ರಿಕ್ ಮೂಲಕವೇ ಹಾಜರಾತಿ ದಾಖಲಿಸಬೇಕು ಎಂದು ಸೂಚಿಸಿದ್ದು, ಬೆಳಗ್ಗೆ 9.15 ರೊಳಗೆ ಬಾರದಿದ್ದಲ್ಲಿ ಅರ್ಧ ದಿನದ ವೇತನ ಕಡಿತಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಒಂದು ವೇಳೆ ಅನಿವಾರ್ಯ ಕಾರಣಗಳಿಂದ ಯಾವುದೇ ಉದ್ಯೋಗಿಗೆ ನಿರ್ದಿಷ್ಟ ದಿನದಂದು ಕಚೇರಿಗೆ ಹಾಜರಾಗಲು ಸಾಧ್ಯವಾಗದಿದ್ದರೆ ಅದನ್ನು ಮುಂಚಿತವಾಗಿ ತಿಳಿಸಬೇಕು ಮತ್ತು ಸಾಂದರ್ಭಿಕ ರಜೆಗೆ ಅರ್ಜಿ ಸಲ್ಲಿಸಬೇಕು ಎಂದು ಕೂಡಾ ಈ ಸುತ್ತೋಲೆಯಲ್ಲಿ ತಾಕೀತು ಮಾಡಿದೆ. ಆಯಾ ಆಫೀಸಿನ ಹಿರಿಯ ಅಧಿಕಾರಿಗಳು ನೌಕರರ ಹಾಜರಾತಿ ಮತ್ತು ಸಮಯಪ್ರಜ್ಞೆಯನ್ನು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಸುತ್ತೊಲೆಯಲ್ಲಿ ತಿಳಿಸಲಾಗಿದೆ.

ನರೇಂದ್ರ ಮೋದಿಯವರು ಮೊದಲ ಬಾರಿ ಪ್ರಧಾನಿಯಾದ ಬಳಿಕ ಕಚೇರಿ ಸಮಯವನ್ನು ಕಡ್ಡಾಯವಾಗಿ ಜಾರಿಗೊಳಿಸಲು ಪ್ರಯತ್ನಿಸಿತು‌. ಇದನ್ನು ನೌಕರರು ವಿರೋಧಿಸಿದ್ದರು. ಅವರಲ್ಲಿ ಹಲವರು ತಾವು ದೂರದ ಪ್ರಯಾಣ ಮಾಡಿ ಬಂದು ಕಚೇರಿಯನ್ನು ತಲುಪಬೇಕಿದೆ ಎಂದಿದ್ದಾರೆ. ಈ ಹಿಂದೆ ಆಧಾರ್ ಸಕ್ರಿಯಗೊಳಿಸಿದ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಉದ್ಯೋಗಿಗಳ ಹಾಜರಾತಿ ಖಚಿತಪಡಿಸಿಕೊಳ್ಳಲು ಮತ್ತು ಮೇಲ್ವಿಚಾರಣೆ ಮಾಡಲು ಸರ್ಕಾರ ಸೂಚಿಸಿತ್ತು. ಇದೀಗ ಕೋವಿಡ್ ಸಾಂಕ್ರಾಮಿಕ ದ ಬಳಿಕ ಈ ವ್ಯವಸ್ಥೆ ಮತ್ತೆ ಹಾದಿ ತಪ್ಪಿದೆ ಎನ್ನಲಾಗಿದ್ದು, ಜನರು ನಿಗದಿಯಾದ ಸಮಯಕ್ಕೆ ಕೆಲಸಕ್ಕೆ ಹಾಜರಾಗಬೇಕು ಎಂದು ಸೂಚಿಸಲಾಗಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement