ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಆರೋಗ್ಯ

ರಾಜ್ಯದಲ್ಲಿ ಹೆಚ್ಚುತ್ತಿರುವ ‘ಡೆಂಗ್ಯೂ’ ಜ್ವರದ ಬಗ್ಗೆ ಭಯಬೇಡ, ಇರಲಿ ಈ ಎಚ್ಚರ..!

Published

on

ಬೆಂಗಳೂರು:ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆ ಸಾಂಕ್ರಾಮಿಕ ರೋಗಗಳು ಕೂಡ ತಾಂಡವವಾಡುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಡೆಂಗ್ಯೂ ಕೇಸ್ ಹೆಚ್ಚಳವಾಗುತ್ತಿದೆ. ಹಾಗಾದರೆ ಈ ಡೆಂಗ್ಯೂ ರೋಗದ ಲಕ್ಷಣಗಳು, ಮುನ್ನೆಚ್ಚರಿಕೆ ಕ್ರಮಗಳು ಏನೇನು ಎಂಬುದನ್ನು ತಿಳಿಯೋಣ.

ಡೆಂಗ್ಯೂ ಜ್ವರದ ಲಕ್ಷಣಗಳು

ಇದ್ದಕ್ಕಿದ್ದಂತೆ ತೀವ್ರ ಜ್ವರ ಕಣ್ಣುಗಳ ಹಿಂಭಾಗದಿಂದ ನೋವು ವಾಂತಿ, ವಾಕರಿಕೆದೇಹ ಮತ್ತು ಕೀಲು ನೋವುಗಳು ರಕ್ತದಲ್ಲಿ ಹೆಚ್ಚಿದ ಹೆಮಟೋಕ್ರಿಟ್ (ಹಿಮೋಗ್ಲೋಬಿನ್). ಅದೇ ಸಮಯದಲ್ಲಿ ಪ್ಲೇಟ್ಲೆಟ್ಗಳು ವೇಗವಾಗಿ ಕುಸಿಯುತ್ತವೆ.ಹೊಟ್ಟೆ ನೋವು, ಆಯಾಸ ಹೊಟ್ಟೆ ಅಥವಾ ಎದೆಯಲ್ಲಿ ನೀರಿನ ಶೇಖರಣೆ ನಿಲ್ಲದೆ ವಾಂತಿಒಸಡುಗಳಂತಹ ಭಾಗಗಳಿಂದ ರಕ್ತಸ್ರಾವ ಚರ್ಮದ ಮೇಲೆ ಕೆಂಪು ಚುಕ್ಕೆಗಳ ಕಲೆಗಳು ರಕ್ತದೊತ್ತಡದಲ್ಲಿ ಇಳಿಕೆ, ಮೂರ್ಛೆ.

 

ಡೆಂಗ್ಯೂ ಬರದಂತೆ ತಡೆಗಟ್ಟುವ ಕ್ರಮಗಳು

1) ಡೆಂಗ್ಯೂ ಬಂದ ನಂತರ ಬಳಲುವುದಕ್ಕಿಂತ ಸೋಂಕಿಗೆ ಒಳಗಾಗುವುದನ್ನು ತಪ್ಪಿಸುವುದು ಉತ್ತಮ.
2) ಡೆಂಗ್ಯೂವನ್ನು ಸಂಪೂರ್ಣವಾಗಿ ತಪ್ಪಿಸಬಹುದು. ಸಂಗ್ರಹಿಸಿದ ನೀರಿನಲ್ಲಿ ಡೆಂಗ್ಯೂ ಸೊಳ್ಳೆಗಳು ಬೆಳೆಯುತ್ತವೆ. ಆದ್ದರಿಂದ ಮನೆಯ ಸುತ್ತಲೂ ನೀರು ನಿಲ್ಲದಂತೆ ನೋಡಿಕೊಳ್ಳಬೇಕು.
3) ಹಳೆಯ ಟೈರ್ ಗಳು ಮತ್ತು ಕ್ಯಾನ್ ಗಳನ್ನು ತಕ್ಷಣ ತೆಗೆದುಹಾಕಬೇಕು.
4) ವಾರಕ್ಕೊಮ್ಮೆ ನಿಮ್ಮ ಮನೆಯ ಸುತ್ತ ಕೀಟನಾಶಕಗಳನ್ನು ಸಿಂಪಡಿಸಿ
5 ) ಡೆಂಗ್ಯೂ ಸೊಳ್ಳೆಗಳು ಸಾಮಾನ್ಯವಾಗಿ ಹಗಲಿನಲ್ಲಿ ಸಕ್ರಿಯವಾಗಿರುತ್ತವೆ. ಆದ್ದರಿಂದ, ಹಗಲಿನಲ್ಲಿ ಮಲಗುವಾಗ ಹಾಸಿಗೆಗೆ ಸೊಳ್ಳೆ ಪರದೆಗಳನ್ನು ಬಳಸಬೇಕು.
6) ಸೊಳ್ಳೆಗಳು ಮನೆಯೊಳಗೆ ಪ್ರವೇಶಿಸದಂತೆ ಜಾಲರಿಯನ್ನು ಬಿಗಿಗೊಳಿಸಬೇಕು.

 

 

ಡೆಂಗಿ ಜ್ವರಕ್ಕೆ ನಿರ್ದಿಷ್ಟವಾದ ಚಿಕಿತ್ಸೆ ಇರುವುದಿಲ್ಲ. ಆದರೆ ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆಯನ್ನು ನೀಡಲಾಗುತ್ತದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆಯನ್ನು ಪಡೆಯದಿದ್ದಲ್ಲಿ ರೋಗ ಲಕ್ಷಣಗಳು ಉಲ್ಬಣಗೊಂಡು ಡೆಂಗ್ಯು ರಕ್ತ ಸ್ರಾವ ಜ್ವರ ಹಾಗೂ ಡೆಂಗ್ಯು ಆಘಾತ ಜ್ವರದಿಂದ ಸಾವು ಸಂಭವಿಸಬಹುದು. ಆದ್ದರಿಂದ ಜ್ವರದ ಲಕ್ಷಣಗಳು ಕಂಡುಬಂದ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ಸೂಕ್ತ ಚಿಕಿತ್ಸೆಯನ್ನು ಪಡೆಯಬೇಕು.ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಸೊಳ್ಳೆಗಳು ಮನೆಗಳಲ್ಲಿನ ನೀರು ಶೇಖರಣಾ ಸಂಗ್ರಾಹಕಗಳಾದ, ಸಿಮೆಂಟ್ ತೊಟ್ಟಿಗಳು, ಬ್ಯಾರೆಲ್, ಡ್ರಂ, ಹೂ ಕುಂಡಗಳ ಕೆಳಗಿನ ತಟ್ಟೆಗಳು, ಏರ್-ಕೂಲರ್, ರೆಫ್ರಿಜರೇಟರ್ನ ಡಿ-ಫ್ರಂಟ್ ಟ್ರೇಗಳಲ್ಲಿ ಹಾಗೂ ಮನೆಯ ಸುತ್ತ-ಮುತ್ತಲಿನ ಪರಿಸರದಲ್ಲಿ ಬಿಸಾಡಿದ ಒಡೆದ ಬಾಟಲಿ, ಟೈರು, ಪ್ಲಾಸ್ಟಿಕ್ ಗ್ಲಾಸ್, ಎಳನೀರಿನ ಚಿಪ್ಪು ಹಾಗೂ ಇತರ ಘನತ್ಯಾಜ್ಯ ವಸ್ತುಗಳಲ್ಲಿ ಸಂಗ್ರಹವಾದ ಮಳೆಯ ನೀರಿನಲ್ಲಿ ಈಡಿಸ್ ಸೊಳ್ಳೆಗಳು ಹೇರಳವಾಗಿ ಉತ್ಪತ್ತಿಯಾಗುತ್ತವೆ.

ಆದ್ದರಿಂದ ಮನೆಯಲ್ಲಿರುವ ಎಲ್ಲಾ ನೀರಿನ ಸಂಗ್ರಹಗಳು ಮತ್ತು ಮೇಲ್ಚಾವಣಿಯಲ್ಲಿರುವ ತೊಟ್ಟಿಯ ನೀರನ್ನು ಕನಿಷ್ಠ ವಾರಕ್ಕೊಮ್ಮೆ ಖಾಲಿ ಮಾಡಿ, ಉಜ್ಜಿ ತೊಳೆದು, ಒಣಗಿಸಿ ನೀರನ್ನು ಮತ್ತೆ ತುಂಬಿಸಿ ಭದ್ರವಾಗಿ ಮುಚ್ಚಳಿಕೆಯಿಂದ ಮುಚ್ಚುವುದು. ಮನೆಯ ಸುತ್ತ-ಮುತ್ತಲಿನ ಪರಿಸರದಲ್ಲಿನ ಒಡೆದ ಬಾಟಲಿ, ಟಿನ್, ಟೈರು ಇತ್ಯಾದಿ ಘನತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರವಹಿಸುವುದು.

ಘನತ್ಯಾಜ್ಯ ವಸ್ತುಗಳನ್ನು ಬೋರಲಾಗಿಡುವುದು ಮತ್ತು ಶೀಘ್ರವಾಗಿ ಸೂಕ್ತ ವಿಲೇವಾರಿ ಮಾಡಬೇಕು. ಏರ್ ಕೂಲರ್ಗಳಲ್ಲಿ ನೀರನ್ನು ಕನಿಷ್ಠ ವಾರಕ್ಕೊಮ್ಮೆ ಬದಲಾಯಿಸಬೇಕು. ಯಾವಾಗಲೂ ಮೈ ತುಂಬಾ ಬಟ್ಟೆ ಧರಿಸಬೇಕು. ಹಗಲು ಹೊತ್ತಿನಲ್ಲಿ ನಿದ್ರಿಸುವ/ವಿಶ್ರಾಂತಿ ಪಡೆಯುವ ಗರ್ಭಿಣಿಯರು, ಮಕ್ಕಳು ಮತ್ತು ವಯಸ್ಸಾದವರು ತಪ್ಪದೆ ಸೊಳ್ಳೆ ಪರದೆಯನ್ನು ಉಪಯೋಗಿಸಬೇಕು. ಡೆಂಗಿ ಜ್ವರ ಪೀಡಿತರೂ ಸಹ ತಪ್ಪದೆ ಸೊಳ್ಳೆ ಪರದೆಯನ್ನು ಉಪಯೋಗಿಸಬೇಕು. ಜ್ವರ ಪೀಡಿತರು ಸಾಕಷ್ಟು ದ್ರವರೂಪದ ಆಹಾರಗಳನ್ನು ಸೇವಿಸುವುದು ಹಾಗೂ ಅಗತ್ಯ ವಿಶ್ರಾಂತಿಯನ್ನು ಪಡೆಯಬೇಕು. ಮನೆಯ ಕಿಟಕಿ ಬಾಗಿಲುಗಳಿಗೆ ಸೊಳ್ಳೆ ನಿರೋಧಕ ಜಾಲರಿಗಳನ್ನು ಅಳವಡಿಸಬೇಕು.

ಈಡಿಸ್ ಲಾರ್ವಾ ಸಮೀಕ್ಷೆ ಹಾಗೂ ಉತ್ಪತ್ತಿತಾಣ ಸಮೀಕ್ಷೆಗೆಂದು ಮನೆ ಭೇಟಿ ನೀಡುವ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಸ್ವಯಂಸೇವಕರು ನೀಡುವ ಸಲಹೆ-ಸೂಚನೆಗಳನ್ನು ಪಾಲಿಸಬೇಕು.
ಶಾಲಾ ಕಾಲೇಜು, ಅಂಗನವಾಡಿ, ಸರ್ಕಾರಿ / ಖಾಸಗಿ ಕಛೇರಿಗಳು, ಬಸ್ ಡಿಪೋ ಇತ್ಯಾದಿಗಳಲ್ಲಿಯೂ – ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳನ್ನು ನಿರ್ಮೂಲನೆ ಮಾಡುವುದು ಅಗತ್ಯವಾಗಿದೆ.ಡೆಂಗ್ಯು ಜ್ವರದ ಲಕ್ಷಣಗಳು ಕಂಡು ಬಂದಲ್ಲಿ ಸ್ವಯಂ ವೈದ್ಯ ಪದ್ಧತಿಯನ್ನು ಪಾಲಿಸದೆ, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯಬೇಕು. ಡೆಂಗ್ಯು ಜ್ವರದ ಲಕ್ಷಣಗಳಿದ್ದಲ್ಲಿ ಬ್ಲೂಫಿನ್ ಅಥವಾ ಇತರ ನೋವು ನಿವಾರಕಗಳನ್ನು ಸೇವಿಸಬಾರದು. ಇದರಿಂದ ರಕ್ತಸ್ರಾವವಾಗುವ ಸಾಧ್ಯತೆಗಳಿವೆ ಎಂದು ಎಚ್ಚರಿಕೆ ನೀಡಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement