Published
6 months agoon
By
Akkare Newsಜೆಡಿಎಸ್ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್ ಪಕ್ಷದ ಎಂಎಲ್‌ಸಿ ಸೂರಜ್ ರೇವಣ್ಣರನ್ನು14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ 42ನೇ ಎಸಿಎಂಎಂ ಕೋರ್ಟ್‌ನ ನ್ಯಾಯಾಧೀಶರಿಂದ ಆದೇಶ ಹೊರಡಿಸಿದ್ದಾರೆ. ಶನಿವಾರ ಸಂತ್ರಸ್ತ ನೀಡಿದ್ದ ದೂರು ಆಧರಿಸಿ ನಿನ್ನೆ ಬೆಳಿಗ್ಗೆ ಹಾಸನದ ಸೆನ್ ಠಾಣೆ ಪೊಲೀಸರು ಸೂರಜ್ರನ್ನು ಬಂಧಿಸಿದ್ದರು. ಬಳಿಕ ನ್ಯಾಯಾಧೀಶರ ನಿವಾಸದಲ್ಲಿ ಜಡ್ಜ್ ಮುಂದೆ ಸೂರಜ್ನನ್ನು ಹಾಜರುಪಡಿಸಲಾಗಿತ್ತು.
ಹಾಸನದಲ್ಲಿ ಸೂರಜ್ ರೇವಣ್ಣರ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ಅವರನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರು ಪಡಿಸಲಾಯಿತು. ಬಳಿಕ ನ್ಯಾಯಾಧೀಶರು ಸೂರಜ್ ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದ್ದಾರೆ.
ಇನ್ನು ಸೂರಜ್ ರೇವಣ್ಣರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಸಿಐಡಿಗೆ ವಹಿಸಿ ಆದೇಶಿಸಿದೆ. ಆದರೆ ಈ ಪ್ರಕರಣ ಇನ್ನೂ ಅಧಿಕೃತವಾಗಿ ಸಿಐಡಿಗೆ ವರ್ಗಾವಣೆ ಆಗಿಲ್ಲ. ಹೀಗಾಗಿ ಇಂದು ಸೂರಜ್ ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ನಾಳೆ ಬಾಡಿವಾರೆಂಟ್ ಮೇಲೆ ಸಿಐಡಿ ವಶಕ್ಕೆ ಪಡೆಯುವ ಸಾಧ್ಯತೆ ಇದೆ.