Published
6 months agoon
By
Akkare Newsಕರ್ತವ್ಯಕ್ಕೆ ಹೊರಡಬೇಕಾಗಿದ್ದ ಯುವತಿ ಹೃದಯಾಘಾತದಿಂದ ಮನೆಯಲ್ಲಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ನೆಲಜಿ ಗ್ರಾಮದಲ್ಲಿ ನಡೆದಿದೆ.
ನೆಲಜಿ ಗ್ರಾಮದ ಕಾಫಿ ಬೆಳೆಗಾರರಾದ ಪೊನ್ನಪ್ಪ ಅವರ ಮಗಳು ನಿಲಿಕಾ ಪೊನ್ನಪ್ಪ (24) ಮೃತ ಯುವತಿ.
ನಿಲಿಕಾ ಮಡಿಕೇರಿಯಲ್ಲಿರುವ ಕೊಡಗು ವೈದ್ಯಕೀಯ ಕಾಲೇಜು ಮತ್ತು ಬೋಧಕ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಇಂದು ಕರ್ತವ್ಯಕ್ಕೆ ಹೊರಟಾಗ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ನಿಲಿಕಾ ವಾಪಸ್ ತನ್ನ ಕೋಣೆಗೆ ಹೋಗಿ ಹಾಸಿಗೆ ಮೇಲೆ ಕುಸಿದು ಬಿದ್ದಿದ್ದಾಳೆ. ಯುವತಿ ತಾಯಿ ಹಿಂದಿನಿಂದ ಹೋಗಿ ಏನಾಯಿತು ಮಗಳೇ ಎಂದು ಕೇಳುವಷ್ಟರಲ್ಲಿಯೇ ನಿಲಿಕಾಳ ಪ್ರಾಣ ಪಕ್ಷಿ ಹಾರಿ ಹೋಗಿದೆ. ತಮ್ಮ ಕಣ್ಣೆದುರೇ ಮಗಳನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದ್ದಾರೆ.