Published
6 months agoon
By
Akkare Newsಹಿಂಬದಿಯಿಂದ ಲಾರಿಗೆ ಟಿಟಿ ವಾಹನವೊಂದು ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ 12 ಜನರು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್ನಲ್ಲಿ ಇಂದು(ಶುಕ್ರವಾರ) ಬೆಳಗ್ಗೆ ನಡೆದಿದೆ.
ಮೃತರೆಲ್ಲರೂ ಶಿವಮೊಗ್ಗ ಮೂಲದ ನಿವಾಸಿಗಳು ಎಂಬ ಮಾಹಿತಿ ಇದೆ. ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿದೆ.
ಘಟನೆಯ ಮಾಹಿತಿ ಕಲೆಹಾಕಲು ಈ ದಿನ.ಕಾಮ್ ಬ್ಯಾಡಗಿ ಪೋಲಿಸರನ್ನು ಸಂಪರ್ಕಿಸಿದಾಗ, “ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 12 ಮಂದಿ ಮೃತಪಟ್ಟಿದ್ದಾರೆ. ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಒಟ್ಟು 16 ಮಂದಿ ಟಿಟಿ ವಾಹನದಲ್ಲಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಮೃತಪಟ್ಟವರು ಭದ್ರಾವತಿ ಮೂಲದವರು ಅಂತ ತಿಳಿದು ಬಂದಿದೆ. ಮೃತಪಟ್ಟವರ ವಿವರಗಳನ್ನು ಕಲೆ ಹಾಕುತ್ತಿದ್ದೇವೆ” ಎಂದು ತಿಳಿಸಿದ್ದಾರೆ.
ಸ್ಥಳಕ್ಕೆ ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶು ಕುಮಾರ್ ರಿಯಾಕಡ, ಬ್ಯಾಡಗಿ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.