Published
6 months agoon
By
Akkare Newsಬೆಂಗಳೂರು: ಹೈಕೋರ್ಟ್ ನಿಂದ ಕನ್ನಡದ ಖಾಸಗಿ ಸುದ್ದಿ ವಾಹಿನಿ ಪವರ್ ಟಿವಿಯನ್ನು ಬಂದ್ ಮಾಡುವಂತೆ ಆದೇಶ ಮಾಡಿದ ಬೆನ್ನಲ್ಲೇ ಮಾಲೀಕ ರಾಕೇಶ್ ಶೆಟ್ಟಿ ವಿರುದ್ಧ ರೌಡಿ ಶೀಟರ್ ಓಪನ್ ಮಾಡುವಂತೆ ಮಾಜಿ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟೆಣ್ಣನವರ ಆಗ್ರಹಿಸಿದ್ದಾರೆ.
ಇಂದು ಬೆಂಗಳೂರಿನ ಪ್ರೆಸ್ ಕ್ಲಪ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು, Power Tv ಚಾನೆಲ್ ನ ಮುಖ್ಯಸ್ಥ ಎಂದು ಹೇಳಿಕೊಂಡಿದ್ದ ರಾಕೇಶ ಶೆಟ್ಟಿ ಎಂಬ ವ್ಯಕ್ತಿ ದೃಶ್ಯಮಾಧ್ಯಮ ದುರುಪಯೋಗಪಡಿಸಿಕೊಂಡು ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿದ್ದು ಮಾತ್ರವಲ್ಲದೆ, ಪರವಾನಿಗೆ ಇಲ್ಲದೇ ಒಂದು satellite ಚಾನೆಲ್ ನಡೆಸುತ್ತಿದ್ದ ಕಾರಣ ದಿನಾಂಕ: 25-06-2024 ರಂದು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯ Power Tv ಪ್ರಸಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ ಎಂದಿದ್ದಾರೆ.