Published
6 months agoon
By
Akkare Newsಬೆಂಗಳೂರು :ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ (97) ಅವರು ವಯೋಸಹಜ ಕಾಯಿಲೆಯಿಂದ ಕೊನಯುಸಿರೆಳೆದಿದ್ದಾರೆ.
ಮೃತರಿಗೆ ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಲಚ್ಚಿ ಪೂಜಾರ್ತಿ ಕೃಷಿಕರಾಗಿದ್ದರು. ರಾಜಕೀಯ ಕ್ಷೇತ್ರದಲ್ಲಿ ಉನ್ನತ ಸ್ಥಾನ ಏರಿದ ಪ್ರತಿ ಸಂದರ್ಭದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರು, ತಾಯಿ ಮನೆಗೆ ತೆರಳಿ ಆಶೀರ್ವಾದ ಪಡೆಯುತ್ತಿದ್ದರು. ಅಲ್ಲದೇ ಚುನಾವಣೆ ವೇಳೆ ತಾಯಿಯೊಂದಿಗೆ ತೆರಳಿ ಮತ ಚಲಾಯಿಸುತ್ತಿದ್ದರು. ಇನ್ನು ತಮ್ಮ ಯಶಸ್ಸಿನಲ್ಲಿ ತಾಯಿಯವರ ಪಾತ್ರ ಮಹತ್ವದ್ದು ಎಂದು ಯಾವಾಗಲೂ ಸ್ಮರಿಸುತ್ತಿದ್ದರು.
ಇವರ ನಿಧನಕ್ಕೆ ಹಲವು ರಾಜಕೀಯ ನಾಯಕರು, ಗಣ್ಯರು ಸಂತಾಪ ಸೂಚಿಸಿದ್ದಾರೆ.