Published
6 months agoon
By
Akkare Newsಶಿವಮೊಗ್ಗ: ಶಿವಮೊಗ್ಗ ನಗರದ ಗಾಂಧಿ ಬಜಾರ್‌ನಲ್ಲಿರುವ ಬಟ್ಟೆ ಮಾರುಕಟ್ಟೆಯಲ್ಲಿ ರಾತ್ರಿ 10 ಗಂಟೆ ವೇಳೆಗೆ ಅಗ್ನಿ ಅವಘಡ ಉಂಟಾಗಿ, ಅಪಾರ ಪ್ರಮಾಣದ ಹಾನಿಯಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿ ಏಳೆಂಟು ಬಟ್ಟೆ ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿ ಹೋಗಿವೆ. ಒಳಗಿದ್ದ ವಸ್ತುಗಳು ಬೆಂಕಿಗಾಹುತಿಯಾಗಿವೆ..
ಬಸವೇಶ್ವರ ದೇವಸ್ಥಾನದ ಹಿಂಭಾಗದ ಬಟ್ಟೆ ಮಾರುಕಟ್ಟೆಯ ಅಂಗಡಿಗಳಿಗೆ ಬೆಂಕಿ ತಗುಲಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು, ಸ್ಥಳಕ್ಕೆ ಆಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಆದರೆ ಈ ವೇಳೆಗೆ ಇಡೀ ಆವರಣದಲ್ಲಿ ದಟ್ಟ ಹೊಗೆ ಆವರಿಸಿದೆ. ಹಾಗಾಗಿ ಎಲ್ಲೆಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂಬುದು ಗಮನಕ್ಕೆ ಬಾರದೆ, ಕಾರ್ಯಾಚರಣೆಗೆ ಅಡ್ಡಿಯಾಗಿದೆ.