Connect with us

ರಾಜಕೀಯ

ನೇಮಕಾತಿಯಲ್ಲಿ ಆಕ್ರಮ ಆರೋಪ: ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧದ ತನಿಖೆಗೆ ಹೈಕೋರ್ಟ್‌ ಅಸ್ತು

Published

on

ಕೈಗಾರಿಕೆ ಇಲಾಖೆಯ ಮಾರ್ಕೆಟಿಂಗ್‌, ಜಾಹೀರಾತು ಮತ್ತು ಪ್ರಚಾರ ಸಂಸ್ಥೆಯಲ್ಲಿ 2011-15ರಲ್ಲಿ ನಡೆದ ನೇಮಕಾತಿಯಲ್ಲಿ ಅಕ್ರಮ ನಡೆಸಿದ ಆರೋಪದ ಮೇಲೆ ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧದ ತನಿಖೆಗೆ ಅಸ್ತು ಎಂದಿರುವ ಹೈಕೋರ್ಟ್‌, ಅವರನ್ನು ಬಂಧಿಸದಂತೆ ಬೆಂಗಳೂರಿನ ಹೈಗ್ರೌಂಡ್ಸ್‌ ಪೊಲೀಸರಿಗೆ ನಿರ್ದೇಶಿಸಿದೆ.

 

ಪ್ರಕರಣ ಸಂಬಂಧ ತನಿಖೆ ನಡೆಸುವಂತೆ ಹೈಗ್ರೌಂಡ್ಸ್ ಠಾಣೆ ಪೊಲೀಸರಿಗೆ ನಿರ್ದೇಶಿಸಿರುವ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು ಎಂದು ಕೋರಿ ಮಾಜಿ ಸಚಿವ ಮುರುಗೇಶ್‌ ನಿರಾಣಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ಏಕಸದಸ್ಯ ಪೀಠ ನಡೆಸಿತು.

 

ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸಬಹುದು. ಆದರೆ, ತನಿಖೆಗೆ ಸಹಕರಿಸಿದರೆ, ಅರ್ಜಿದಾರರನ್ನು ತನಿಖಾಧಿಕಾರಿಗಳು ಬಂಧಿಸುವಂತಿಲ್ಲ ಎಂದು ನಿರ್ದೇಶಿಸಿ ಪೀಠ ಮಧ್ಯಂತರ ಆದೇಶ ನೀಡಿದೆ.

ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ಪ್ರಕರಣದ ಮೂಲ ದೂರುದಾರ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಮತ್ತು ಬೆಂಗಳೂರು ಹೈಗ್ರೌಂಡ್ಸ್‌ ಪೊಲೀಸರಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ.

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version