Published
6 months agoon
By
Akkare Newsಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ರವಿವಾರ ಬಿರುಸಿನ ಗಾಳಿ ಮಳೆ ಮುಂದುವರಿದಿದ್ದು, ಕೆಲವು ಕಡೆಗಳಲ್ಲಿ ಹಾನಿ ಸಂಭವಿಸಿದೆ. ದಿನವಿಡೀ ಬಿಟ್ಟು ಬಿಟ್ಟು ಮಳೆಯಾಗಿದ್ದು, ಕೆಲವೆಡೆ ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ ಆವರಿಸಿದೆ.
ನಾವೂರು ಗ್ರಾಮದ ಕೈಕಂಬ ಸೇತುವೆ ಶಿಥಿಲಾವಸ್ಥೆಯಲ್ಲಿರುವ ಕಾರಣ ವಾಹನ ಸಂಚಾರವನ್ನು ತಡೆ ಹಿಡಿಯಲಾಗಿದೆ.
ಚಿಕ್ಕಮಗಳೂರು ವ್ಯಾಪ್ತಿಯ ಚಾರ್ಮಾಡಿ ಘಾಟಿಯಲ್ಲಿ ಕಳೆದ ವರ್ಷ ನಿರ್ಮಿಸಿದ ತಡೆಗೋಡೆ ಬಿರುಕು ಬಿಟ್ಟಿದೆ. ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಪುರಾತನ ಅಶ್ವತ್ಥಮರ ಧರೆಗುರುಳಿದೆ.
ಉಳ್ಳಾಲದ ಬಟ್ಟಪ್ಪಾಡಿಯಲ್ಲಿ ಕಡಲ್ಕೊ ರೆತ ಮುಂದುವರಿದಿದೆ. ಪಣಂ ಬೂರು ಬೀಚ್‌ನ ರೆಸಾರ್ಟ್‌ನಲ್ಲಿ ಹಾಕಲಾಗಿದ್ದ ತಗಡು ಶೀಟ್‌ನ ಮೇಲ್ಛಾವಣಿ ಸುಮಾರು 20 ಅಡಿಗೂ ದೂರ ಹಾರಿದೆ. ಸಮೀಪದಲ್ಲೇ ಇದ್ದ ಬೇರೊಂದು ಶಾಪ್‌ಗೆ ಹಾನಿಯಾಗಿದೆ. ಘಟನೆ ಬೆಳಗ್ಗೆ ಆಗಿರುವ ಕಾರಣ ಜನರು ಗಾಯಗೊಂಡಿಲ್ಲ.
ಸುರತ್ಕಲ್‌ನ ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.ಆರೆಂಜ್, ಎಲ್ಲೋ ಅಲರ್ಟ್‌ಕರಾವಳಿ ಭಾಗದಲ್ಲಿ ಬಿರುಸಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಜು.8ರಂದು ಆರೆಂಜ್ ಅಲರ್ಟ್, ಜು.9ರಂದು ಎಲ್ಲೋ ಅಲರ್ಟ್ ಮತ್ತು ಜು.10 ಮತ್ತು 11ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉಡುಪಿಯಲ್ಲಿ ಉತ್ತಮ ಮಳೆಉಡುಪಿ ಜಿಲ್ಲೆಯಲ್ಲಿ ರವಿವಾರವೂ ಹಲವೆಡೆ ಉತ್ತಮ ಮಳೆಯಾಗಿದೆ. ಕುಂದಾಪುರ ಭಾಗದಲ್ಲಿ ದಿನವಿಡೀ ಧಾರಾಕಾರ ಮಳೆ ಸುರಿದಿದೆ.
ಕಾರ್ಕಳ, ಹೆಬ್ರಿ, ಉಡುಪಿ ಸುತ್ತಮುತ್ತ ಉತ್ತಮ ಮಳೆ ಸುರಿದಿದೆ. ಕಾಪು, ಬ್ರಹ್ಮಾವರ ಸುತ್ತಮುತ್ತ ಬಿಸಿಲು – ಮೋಡ ಕವಿದ ವಾತಾವರಣದ ನಡುವೆ ಉತ್ತಮ ಮಳೆಯಾಗಿದೆ. ಸಂಜೆಯಾಗುತ್ತಿದ್ದಂತೆ ಧಾರಾಕಾರ ಮಳೆಯಾಗಿದೆ.
ಚಾರ್ಮಾಡಿ : ಗುಡ್ಡ ಕುಸಿತ
ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಗುಡ್ಡ ಕುಸಿದ ಘಟನೆ ರವಿವಾರ ರಾತ್ರಿ ಸಂಭವಿಸಿದೆ. ಚಿಕ್ಕಮಗಳೂರು – ದ.ಕ.ಜಿಲ್ಲೆ ಸಂಪರ್ಕದ ಮಂಗಳೂರು-ವಿಲ್ಲು ಪುರಂ ರಾಷ್ಟ್ರೀಯ ಹೆದ್ದಾರಿಯ ವ್ಯಾಪ್ತಿಯ ಆಲೇಖಾನ್ ಬಳಿ ಗುಡ್ಡ ಕುಸಿದು ರಸ್ತೆ ಬದಿಗೆ ಬಿದ್ದಿದೆ. ಬಣಕಲ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದಾರೆ.