ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಮಾದಕ ವಸ್ತು ಎಂಡಿಎಂಎ ಮಾರಾಟ ಪುತ್ತೂರು ಮೂಲದ ಬನ್ನೂರು ನಿವಾಸಿ ಸಫ್ಘಾನ್ ಬಂಧನ

Published

on

ಪುತ್ತೂರು/ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಪುತ್ತೂರಿನ ಬನ್ನೂರು ಗ್ರಾಮದ ಸಫ್ಘಾನ್ (32)ಎಂಬುದಾಗಿ ಎಂದು ಪೊಲೀಸರು ತಿಳಿಸಿದ್ದಾರೆ.

 

ಆರೋಪಿ ಸಫ್ಘಾನ್ ನಿಂದ ಪೊಲೀಸರು ಬೈಕ್ ನ ಸೀಟಿನಲ್ಲಿಟ್ಟಿದ್ದ ರೂ. 90,000 ರೂ. ಮೌಲ್ಯದ 36 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕಮಾಪಕ ಹಾಗೂ ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಪೋಲಿಸ್ ನಿರೀಕ್ಷಕರಾದ ಶ್ಯಾಂ ಸುಂದರ್ ಹೆಚ್ ಎಂ, ಪಿಎಸ್ಸಿಯವರಾದ ನರೇಂದ್ರ ಮತ್ತು ಸಿಸಿಬಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version