Published
6 months agoon
By
Akkare Newsಕರಾವಳಿ ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿದ್ದು, ನೆರೆ ಪರಿಸ್ಥಿತಿ ಕೆಲವೊಂದು ತಗ್ಗುಪ್ರದೇಶಗಳಲ್ಲಿ ಉಂಟಾಗಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳವಾರ (ನಾಳೆ, ಜುಲೈ 9) ರಂದು ಉಡುಪಿ ಜಿಲ್ಲಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಮತ್ತು ಪಿಯು ಕಾಲೇಜುಗಳಿಗೆ ರಜೆ ಸಾರಲಾಗಿದೆ.
ಮಳೆ ತೀವ್ರತೆಯ ಕಾರಣ ಜಿಲ್ಲಾಧಿಕಾರಿ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಗೆ ಅನ್ವಯಿಸಿ ರಜೆ ಘೋಷಣೆ ಮಾಡಿದ್ದಾರೆ.ಪದವಿ, ಸ್ನಾತಕೋತ್ತರ, ಡಿಪ್ಲೋಮಾ ಮತ್ತು ಐಟಿಐ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ.