Published
6 months agoon
By
Akkare Newsಕಡಬ: ಇಲ್ಲಿನ ಕೋಡಿಂಬಾಳ ಗ್ರಾಮದ ಪುಳಿಕ್ಕುಕ್ಕು ಎಂಬಲ್ಲಿ ಕುಮಾರಧಾರ ನದಿಯ ಮದ್ಯ ಭಾಗದ ಪ್ದೆಯೊಂದರಲ್ಲಿ ಸಿಲುಕಿಕೊಂಡಿದ್ದು ಆಗ್ನಿ ಶಾಮಕ ದಳ ಮತ್ತು ಪೊಲೀಸರ ಕಾರ್ಯಾಚರಣೆಯಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಜುಲೈ 8 ರ ಮುಂಜಾನೆ ನಡೆದಿದೆ.
ನಿರಂತರ ಮಳೆಗೆ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು ಪುಳಿಕುಕ್ಕು ಸೇತುವೆ ಮತ್ತು ರೈಲು ಸೇತುವೆ ಮದ್ಯ ಭಾಗದಲ್ಲಿರುವ ಪೊದೆಯೊಂದರಲ್ಲಿ ಸಿಲುಕಿಕೊಂಡು ರಕ್ಷಣೆಗಾಗಿ ಕೂಗಾಡಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ರಾತ್ರಿಯಿಂದಲೇ ಕೂಗಾಡುವ ಧ್ವನಿ ಕೇಳುತ್ತಿತ್ತು ಎಂದು ಕೆಲವರು ಮಾಹಿತಿ ನೀಡಿದ್ದಾರೆ.
ಬ್ಯಾಗ್ ಸೇತುವೆ ಪಕ್ಕದ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದೆ ಎನ್ನಲಾಗುತ್ತಿದ್ದು ನದಿಯಿಂದ ಕೆಳಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದನೇ ಅಥವಾ ಇನ್ಯಾವುದಾದರೂ ಘಟನೆ ನಡೆಯಿತೆ ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಯುವಕನನ್ನು ರಕ್ಷಣೆ ಮಾಡಿ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.ಅಗ್ನಿಶಾಮಕದಳದ ಸಿಬ್ಬಂದಿಗಳು,ಕಡಬ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ