ನಮ್ಮೊಂದಿಗೆ ಸಂಪರ್ಕ ಸಾಧಿಸಿ

ರಾಜಕೀಯ

ಚುನಾವಣೆ ಮುಗಿದು ಒಂದೇ ತಿಂಗಳಿಗೆ ಭಾರತ್‌ ರೈಸ್‌ ಅಕ್ಕಿ ಬಂದ್!

Published

on

 

ಕೇಂದ್ರ ಸರ್ಕಾರ ಆರಂಭಿಸಿದ್ದ ಮಹತ್ವಾಕಾಂಕ್ಷಿಯ ಭಾರತ್‌ ರೈಸ್‌ ಮಾರಾಟವನ್ನು ಜುಲೈ ತಿಂಗಳಿನಿಂದ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.

ದೇಶದ ಎಲ್ಲಾ ಜನರಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ವಿತರಿಸಲು ಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಭಾರತ್‌ ರೈಸ್‌ ಅಕ್ಕಿಯನ್ನು ಬಿಡುಗಡೆ ಮಾಡಿತ್ತು. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಈ ಅಕ್ಕಿ ಮತದಾರರನ್ನು ಸೆಳೆದಿತ್ತು.

ಈ ಯೋಜನೆಯ ಅಡಿ 29 ರೂ.ಗೆ 1 ಕೆಜಿ ಅಕ್ಕಿ, 27.50 ರೂ.ಗೆ 1 ಕೆಜಿ ಗೋಧಿ ಹಿಟ್ಟು, 60 ರೂ.ಗೆ 1 ಕೆಜಿ ಕಡಲೆ ಬೆಳೆ ಮಾರಾಟ ಮಾಡಲಾಗುತ್ತಿತ್ತು. ಜನ ಸಂದಣಿ ಹೆಚ್ಚಿನ ಜಾಗಗಳಲ್ಲಿ ಮೊಬೈಲ್‌ ವ್ಯಾನ್‌ ಮೂಲಕ ಅಕ್ಕಿ, ಬೆಳೆಗಳನ್ನು ಗ್ರಾಹಕರಿಗೆ ನೀಡಲಾಗುತ್ತಿತ್ತು. ಜೂನ್ 10 ರವರೆಗೆ ಕೇಂದ್ರ ಸರ್ಕಾರ ಆದೇಶದ ಅನ್ವಯ ದಾಸ್ತಾನುಗಳು ಮಾರಾಟವಾದ ನಂತರ ಪೂರೈಕೆಯನ್ನು ಸ್ಥಗಿತ ಮಾಡಲಾಗಿದೆ.

ಯಾವ ಕಾರಣಕ್ಕೆ ಮಾರಾಟವನ್ನು ಸ್ಥಗಿತ ಮಾಡಲಾಗಿದೆ ಎನ್ನುವುದು ತಿಳಿದುಬಂದಿಲ್ಲ. ಭಾರತ್ ರೈಸ್‌ಗೆ ಗ್ರಾಹಕರಿಂದ ಬೇಡಿಕೆ ಇತ್ತು. ಇದುವರೆಗೂ 5 ಸಾವಿರ ಟನ್ ಮಾರಾಟ ಮಾಡಲಾಗಿದೆ.

ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿದ್ದ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಲು ʻಭಾರತ್‌ʼ ಬ್ರ್ಯಾಂಡ್‌ ಅಕ್ಕಿ ಮಾರಾಟ ಆರಂಭಿಸುತ್ತಿದ್ದೇವೆ ಎಂದು ಕೇಂದ್ರ ಸರ್ಕಾರ ತಿಳಿಸಿತ್ತು. ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಮಹಾಮಂಡಳ, ರಾಷ್ಟ್ರೀಯ ಸಹಕಾರ ಗ್ರಾಹಕರ ಮಹಾಮಂಡಳ ಹಾಗೂ ಕೇಂದ್ರೀಯ ಭಂಡಾರಗಳು ಮತ್ತು ಇ-ಕಾಮರ್ಸ್‌ ವೇದಿಕೆಗಳ ಮೂಲಕ ಅಕ್ಕಿ ಮಾರಾಟವಾಗುತ್ತಿತ್ತು.

 

ಕಳೆದ ವರ್ಷ ಮಳೆಯಾಗದ ಕಾರಣ ಭತ್ತದ ಉತ್ಪಾದನೆ ಕುಂಠಿತಗೊಂಡಿದೆ. ದೇಶಾದ್ಯಂತ ಈ ಯೋಜನೆ ಜಾರಿಯಲ್ಲಿರುವ ಕಾರಣ ಪೂರೈಕೆ ಮಾಡುವುದು ಕಷ್ಟವಾಗುತ್ತಿದೆ. ಭಾರತ್‌ ಅಕ್ಕಿ ವಿತರಣೆ ಸಂಬಂಧ ಕೇಂದ್ರ ಸರ್ಕಾರ ಹೊಸ ನೀತಿ ಜಾರಿಗೆ ತರಲು ಚಿಂತನೆ ಮಾಡಿದೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ತಾತ್ಕಾಲಿಕವಾಗಿ ಭಾರತ್‌ ರೈಸ್‌ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎಂಬ ಮಾತುಗಳು ಕೇಳಿ ಬಂದಿದೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version