ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಇಂದು ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋ ಸ್ಕ್ಯಾನ್ ಲಿವರ್ ಫಂಕ್ಷನ್ ಟೆಸ್ಟ್ ತಪಾಸಣೆಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಜೀವನಶೈಲಿ ತಂತ್ರಜ್ಞಾನ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆ.22 ರಂದು ಕೋಡಿಂಬಾಡಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ *ರೇಬಿಸ್ ರೋಗ ನಿರೋಧಕ ಉಚಿತ ಲಸಿಕಾ ಯಶಸ್ವಿ ಕಾರ್ಯಕ್ರಮ 250 ಕ್ಕೂ ಮಿಕ್ಕಿ ಸ್ವನ ಗಳಿಗೆ ಲಸಿಕೆಅಭಿವೃದ್ಧಿ ಕಾರ್ಯಗಳು ಆರೋಗ್ಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆ.22 ರಂದು ಕೋಡಿಂಬಾಡಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ ರೇಬಿಸ್ ರೋಗ ನಿರೋಧಕ ಉಚಿತ ಲಸಿಕಾ ಕಾರ್ಯಕ್ರಮಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಆತ್ರೇಯ ಮಲ್ಟಿಸ್ಲೆಷಲಿಟಿ ಕ್ಲಿನಿಕ್ ಪುತ್ತೂರುವತಿಯಿಂದ : ಉಚಿತ ಗುದಾಗತ ರೋಗಗಳ ತಪಾಸಣಾ ಶಿಬಿರ (ಪೈಲ್ಸ್, ಫಿಷರ್, ಫಿಸ್ತುಲ)Published
11 months agoon
By
Akkare News
ಪುತ್ತೂರು : ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಸುಮಾರು 177 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದೆ. ಈ ಪೈಕಿ ಸುಮಾರು 76 ಪ್ರಕರಣಗಳು ಜೂನ್ ತಿಂಗಳಲ್ಲಿ ಕಾಣಿಸಿಕೊಂಡಿದ್ದು, ಎಲ್ಲಾ 177 ಪ್ರಕರಣದಲ್ಲಿಯೂ ರೋಗಿಗಳು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಪುತ್ತೂರು ಮತ್ತು ಕಡಬ ತಾಲೂಕು ಆರೋಗ್ಯಾಧಿ ಕಾರಿ ಡಾ.ದೀಪಕ್ ರೈ ತಿಳಿಸಿದ್ದಾರೆ.
ಕರಾವಳಿ ಭಾಗದಲ್ಲಿ ಬಿಟ್ಟು ಬಿಟ್ಟು ಸುರಿಯುವ ಮಳೆಯಿಂದಾಗಿ ಹೆಚ್ಚಾಗಿ ಡೆಂಗ್ಯೂ ಸಂಬಂಧಿತ ಜ್ವರಗಳ ಕಾಣಿಸಿಕೊಳ್ಳು ತ್ತವೆ. ಇದೀಗ ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಕಾಣಿಸಿಕೊಂಡಿರುವ ಡೆಂಗ್ಯೂ ಪ್ರಕರಣಗಳಲ್ಲಿ ಎಲ್ಲಾ ರೋಗಿಗಳು ಮಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನ ಪಡೆದುಕೊಳ್ಳುತ್ತಿದ್ದಾರೆ. ಆದ್ರೆ ಆಧಾರ್ ಕಾರ್ಡ್‍ನಲ್ಲಿರುವ ವಿಳಾಸದ ಪ್ರಕಾರ ಅವರು ಪುತ್ತೂರು ಮತ್ತು ಕಡಬ ತಾಲೂಕಿಗೆ ಒಳಪಟ್ಟವರಾಗಿದ್ದಾರೆ. ಹಾಗಾಗಿ ಈ ಡೆಂಗ್ಯೂ ಪ್ರಕರಣ ಪುತ್ತೂರು ಮತ್ತು ಕಡಬ ವ್ಯಾಪ್ತಿಗೆ ಒಳಪಡುತ್ತವೆ.
ಈಗಾಗಲೇ ಕಡಬ ಮತ್ತು ಪುತ್ತೂರು ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಇದರಲ್ಲಿ ಹೆಚ್ಚಾಗಿ ಬೆಂಗಳೂರಿನಲ್ಲಿ ಡೆಂಗ್ಯೂ ಪಾಸಿಟಿವ್ ಕಾಣಿಸಿಕೊಂಡ ರೋಗಿಗಳು ಬಂದು ಇಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನಿಂದ ಬಂದಂತಹ ಡೆಂಗ್ಯೂ ರೋಗಿಗಳ ತೀವ್ರತೆ ಹೆಚ್ಚಾಗಿದೆ. ಆದ್ರೆ ಊರಿನ ಕೆಲವು ಡೆಂಗ್ಯೂ ಪ್ರಕರಣದ ರೋಗಿಗಳ ತೀವ್ರತೆ ತುಂಬಾನೇ ಕಡಿಮೆ ಇದೆ. ಇವೆರಡರ ವ್ಯತ್ಯಾಸ ಅಂದ್ರೆ ನಮ್ಮಲ್ಲಿ ಡೆಂಗ್ಯೂ ರೋಗದ ತೀವ್ರತೆ ಕಡಿಮೆ ಇದ್ದು, ಬೆಂಗಳೂರಿನಿಂದ ಪಾಸಿಟಿವ್ ಆಗಿ ಇಲ್ಲಿಗೆ ಬಂದು ಆಸ್ಪತ್ರೆಗೆ ದಾಖಲು ಆದವರಲ್ಲಿ ತೀವ್ರತೆ ಹೆಚ್ಚಾಗಿದೆ. ಆದರೆ ಈ ತನಕ ಯಾವುದೇ ಡೆಂಗ್ಯೂ ಸಾವಿನ ಪ್ರಕರಣ ವರದಿಯಾಗಿಲ್ಲ.
ಪುತ್ತೂರು ತಾಲೂಕಿನಲ್ಲಿ ಖಚಿತವಾದ 7 ಡೆಂಗ್ಯೂ ಪ್ರಕರಣಗಳು ಇವೆ. ಉಳಿದಂತೆ ವೈರಲ್ ಫೀವರ್ ಗೆ ಸಂಬಂಧ ಪಟ್ಟದ್ದಾಗಿವೆ. ಸದ್ಯ ಜ್ವರಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನ ರೋಗಿಯ ರಕ್ತದ ಮಾದರಿಯನ್ನ ತೆಗೆದು ಜಿಲ್ಲಾಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಅಲ್ಲಿ ಖಚಿತವಾದ ನಂತರ ಡೆಂಗ್ಯೂಗೆ ಸಂಬಂಧಿಸಿದ ಚಿಕಿತ್ಸೆಯನ್ನ ನೀಡಲಾಗುತ್ತದೆ. ಸದ್ಯ ಪುತ್ತೂರಿನ ನಗರ ಪ್ರದೇಶಗಳಲ್ಲಿ ಅತೀ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆಯಾಗುತ್ತಿವೆ. ನಗರ ಪ್ರದೇಶಗಳಲ್ಲಿ ಅನೇಕ ಕಡೆ ಕಟ್ಟಡ ಕಾಮಗಾರಿ, ರಸ್ತೆಯ ಚರಂಡಿ ಕಾಮಗಾರಿ ಹೀಗೆ ಹಲವಾರು ಕೆಲಸ ಕಾರ್ಯಗಳು ನಡೀತಾ ಇವೆ. ಹೀಗಿರುವಾಗ ಕಟ್ಟಡ, ರಸ್ತೆ ಕಾಮಗಾರಿಯ ಕೆಲವು ಸ್ಲ್ಯಾಬ್ ಗಳಲ್ಲಿ ನೀರು ಶೇಖರಣೆಯಾಗುತ್ತದೆ.
ಇದರಿಂದಾಗಿ ಅದರಲ್ಲಿ ಡೆಂಗ್ಯೂ ಸೊಳ್ಳೆಗಳು ಉತ್ಪತ್ತಿಯಾಗಿ ಮನುಷ್ಯನ ಮೇಲೆ ಪ್ರಭಾವ ಬೀರುತ್ತಿವೆ. ಉಪ್ಪಿನಂಗಡಿ ನಗರ ಭಾಗಗಳಲ್ಲೂ 35 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಹಾಗಾಗಿ ಜನರು ಆದಷ್ಟು ಮನೆ ಪಕ್ಕ ನೀರು ಶೇಖರಣೆಯಾಗದಂತೆ ನೋಡಿ ಕೊಳ್ಳಬೇಕು. ಇದಕ್ಕಾಗಿ ಈಗಾಗ್ಲೇ ನಾವು ಬೇರೆ ಬೇರೆ ಅಧಿಕಾರಿಗಳನ್ನು ನೇಮಿಸಿ ಮಾಹಿತಿ ನೀಡುವ ಕೆಲಸ ಆರಂಭಿಸಿದ್ದೇವೆ. ಈ ಮೂಲಕ ಡೆಂಗ್ಯೂ ಜ್ವರ ನಿಯಂತ್ರಣದ ಬಗ್ಗೆ ಪ್ರಯತ್ನ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.