ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಉರುಳಿ ಬಿದ್ದ ಬೃಹತ್ ಮರ ತೆರವು

Published

on

ಪುತ್ತೂರು ಜುಲೈ 13: ಕರಾವಳಿಯಲ್ಲಿ ಮತ್ತೆ ಮಳೆ ಆರಂಭವಾಗಿದೆ. ನಿನ್ನೆಯಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಈ ನಡುವೆ ಮಳೆಯಿಂದಾಗಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಮೆಲೆ ಬೃಹತ್ ಮರವೊಂದು ಉರುಳಿ ಬಿದ್ದ ಘಟನೆ ನಡೆದಿದೆ.

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರಿನ ಬೈಪಾಸ್ ನಲ್ಲಿ ಘಟನೆ ನಡೆದಿದೆ. ರಸ್ತೆ ಪಕ್ಕದಲ್ಲೇ ಇದ್ದ ಬೃಹತ್ ಗಾತ್ರದ ಮರ, ಭಾರಿ ಮಳೆಗೆ ರಸ್ತೆ ಮೇಲೆ ಬಿದ್ದಿದೆ. ಇದರಿಂದಾಗಿ ಸುಮಾರು 4 ಗಂಟೆಗೂ ಮಿಕ್ಕಿ ರಾಷ್ಟ್ರೀಯ ಹೆದ್ದಾರಿ ಬ್ಲಾಕ್ ಆಗಿದೆ. ಸ್ಥಳಕ್ಕೆ ಆಗಮಿಸಿದ ಪೋಲೀಸ್, ಅಗ್ನಿಶಾಮಕದಳದಿಂದ ಮರ ತೆರವು ಕಾರ್ಯಾಚರಣೆ ನಡೆದಿದೆ.

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version