Published
5 months agoon
By
Akkare Newsಮಂಗಳೂರು: ಮಂಗಳೂರಿನ ಸುರತ್ಕಲ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಎಂಎಸ್ ಇಝೇಡ್ ಫಿಶ್ ಮಿಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೀನು ಸಂಸ್ಕರಣ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಫಿಶ್ ಮಿಲ್ ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು, ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ,ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.