Published
5 months agoon
By
Akkare Newsಮಂಗಳೂರು : ಕರಾವಳಿಯಲ್ಲಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು (ಜು.15) ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಭಾರತೀಯ ಹವಾಮಾನ ಇಲಾಖೆಯು ಸೋಮವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸುವ ಮೂಲಕ ಭಾರೀ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಸೋಮವಾರ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ