Published
5 months agoon
By
Akkare Newsಪುತ್ತೂರು: ಪುತ್ತೂರು ಕೋಟಿಚೆನ್ನಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.
ಇಂದು (ಜು.15) ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದೊಳಗೆ ಕೆಳ ಮಹಡಿಯಿಂದ ಮೇಲ್ಮಹಡಿಗೆ ತೆರಳುವ ಮೆಟ್ಟಿಲುಗಳ ಕೆಳಗೆ ವ್ಯಕ್ತಿಯೊಬ್ಬರು ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಂಶಯಗೊಂಡ ಕೆಲವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ ವ್ಯಕ್ತಿ ಮೃತಪಟ್ಟಿರುವುದು ಗಮನಕ್ಕೆ ಬಂದಿದೆ. ಇದೇ ವೇಳೆ ಅನ್ಯ ಕಾರ್ಯ ನಿಮಿತ್ತ ಸ್ಥಳಕ್ಕೆ ಆಗಮಿಸಿದ ಅಕ್ಕರೆ ನ್ಯೂಸ್ ನ ವ್ಯವಸ್ಥಾಪಕರು ಹಾಗೂ ಕೋಡಿಂಬಾಡಿ ಗ್ರಾ.ಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರು ಮತ್ತು ಹರೀಶ್ ಮೃತದೇಹವನ್ನು ಸರಕಾರಿ ಆಸ್ಪತ್ರೆಗೆ ಸಾಗಿಸುವಲ್ಲಿ ಸರಕಾರಿ ಆಸ್ಪತ್ರೆಯ ಸಿಬ್ಬಂದಿಗಳೊಂದಿಗೆ ಪೊಲೀಸರಿಗೆ ನೆರವಾದರು.
ಪೊಲೀಸರ ಅಸಹಾಯಕತೆಯನ್ನು ಮನಗಂಡು ಸ್ಟ್ರೆಚರ್ ತರಿಸಿ 108 ವಾಹನಕ್ಕೆ ಮೃತದೇಹವನ್ನು ಕೊಂಡೊಯ್ಯುವಲ್ಲಿ ಕೈ ಜೋಡಿಸಿದರು. ಮೃತ ದೇಹವನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸಿದ ಜಯಪ್ರಕಾಶ್ ಬದಿನಾರು ಅವರ ಮಾನವೀಯ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.