ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಪಘಾತ

ಅಂಬಲಪಾಡಿ ಮನೆ ದುರಂತ: ಗಾಯಗೊಂಡಿದ್ದ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಶೆಟ್ಟಿ ಮೃತ್ಯು!

Published

on

ಅಂಬಲಪಾಡಿ ಗಾಂಧಿನಗರದ ಮನೆಯಲ್ಲಿ ಸೋಮವಾರ ಸಂಭವಿಸಿದ ಭೀಕರ ಅಗ್ನಿ ದುರಂತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಶ್ವಿನಿ ಶೆಟ್ಟಿ (43) A ಮಂಗಳವಾರ ಮಧ್ಯಾಹ್ನ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಈ ಮೂಲಕ ಅಗ್ನಿ ಅವಘಡದಿಂದ ದಂಪತಿ ದುರಂತ ಅಂತ್ಯ ಕಂಡಂತಾಗಿದೆ.

 

ಬೆಳಗಿನ ಜಾವ ಮನೆಯಲ್ಲಿ ಮಲಗಿದ್ದ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಅಗ್ನಿ ಅವಘಡದಿಂದ ಮನೆಯೊಳಗೆ ಬೆಂಕಿ ಜೊತೆ ದಟ್ಟ ಹೊಗೆ ಆವರಿಸಿದ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡ ಉದ್ಯಮಿ ರಮಾನಂದ ಶೆಟ್ಟಿ ಹಾಗೂ ಅಶ್ವಿನಿ ಶೆಟ್ಟಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಇದರಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ರಮಾನಂದ ಶೆಟ್ಟಿ ಸೋಮವಾರ ಬೆಳಗ್ಗೆಯೇ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.

 

 

ಇವರು ಉಡುಪಿ ನಗರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿದ್ದರು.

 

ಸೋಮವಾರ ರಾತ್ರಿ ನದಿಯಲ್ಲಿ ನೀರಿನ ಪ್ರವಾಹ ಹೆಚ್ಚಾಗಿದ್ದರಿಂದ, ಆನೆಯ ಮೃತದೇಹವು ಕೊಚ್ಚಿ ಕೊಂಡು ಬಂದಿದೆ. ನದಿ ನೀರಿನಲ್ಲಿ ಕೊಚ್ಚಿ ಹೋಗಿರುವ ಆನೆಯ ಮೃತದೇಹಕ್ಕೆ ಅರಣ್ಯ ಇಲಾಖೆ ಹುಡುಕಾಟ ಆರಂಭಿಸಿದ್ದಾರೆ.

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version