ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಸಹಿತ ರಾಜ್ಯದ 40 ಎ ಪ್ರವರ್ಗದ ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು ಅರ್ಜಿ ಆಹ್ವಾನ

Published

on

ಪುತ್ತೂರು: ರಾಜ್ಯ ಧಾರ್ಮಿಕ ಪರಿಷತ್ ಸಭೆಯ ನಿರ್ಣಯಗಳಂತೆ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಹಿತ 40 ಎ ಪ್ರವರ್ಗದ ದೇವಾಲಯಗಳಿಗೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 2011ರ ಸೆಕ್ಷನ್ 25ರನ್ವಯ ವ್ಯವಸ್ಥಾಪನಾ ಸಮಿತಿ ರಚಿಸಲು ಆಸಕ್ತ ಭಕ್ತಾದಿಗಳಿಂದ/ ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸಿ ಪ್ರಕಟಣೆ ಹೊರಡಿಸಲಾಗಿದೆ.

ಈ ಹಿಂದೆಯು ರಾಜ್ಯದಲ್ಲಿನ ಎ ಪ್ರವರ್ಗದ ದೇವಸ್ಥಾನಗಳಿಗೆ ಅರ್ಜಿ ಸಲ್ಲಿಸಲು ತಿಳಿಸಿ ಪ್ರಕಟಣೆ ಹೊರಡಿಸಲಾಗಿತ್ತು. ಆದರೆ ನಿಗದಿತ ಅವಧಿಯೊಳಗೆ ನಿರ್ದಿಷ್ಟ ಅರ್ಜಿಗಳು ಸ್ವೀಕೃತವಾಗಿಲ್ಲವಾಗಿತ್ತು. ಅದಕ್ಕಾಗಿ ದೇವಾಲಯಗಳಿಗೆ ವ್ಯವಸ್ಥಪನಾ ಸಮಿತಿ ರಚಿಸಲು ಮರು ಪ್ರಕಟಣೆಯನ್ನು ಹೊರಡಿಸಲು ಜ.3, ಮಾ.7 ಮತ್ತು ಜೂ. 24ರಂದು ರಾಜ್ಯ ಧಾರ್ಮಿಕ ಪರಿಷತ್ ಸಭೆಯ ವಿಷಯ ಸೂಚಿ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಅದರಂತೆ ಒಟ್ಟು 40 ಎ ಪ್ರವರ್ಗದ ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಸದರಿ ದೇವಾಲಯಗಳ ವ್ಯವಸ್ಥಾಪನಾ ಸಮಿತಿಗೆ ಕನಿಷ್ಠ 25 ವರ್ಷಕ್ಕಿಂತ ಮೇಲ್ಪಟ್ಟ ಆಸಕ್ತ ಭಕ್ತಾಧಿಗಳು ಸದಸ್ಯತ್ವ ಕೋರಿ ಅರ್ಜಿಯನ್ನು ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ ಅರ್ಜಿಯನ್ನು ಆ.3ರ ಒಳಗಾಗಿ ಆಯುಕ್ತರು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಬೆಂಗಳೂರು ಇಲಿಗೆ ನೇರವಾಗಿ ಸಲ್ಲಿಸತಕ್ಕದ್ದು. ಅಂತಹ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು. ನಿಗದಿತ ಅವಧಿಯ ನಂತರದಲ್ಲಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version