Published
5 months agoon
By
Akkare Newsಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ಹೊಸ ಮಾದರಿಯಲ್ಲಿ ನಗರದ ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲು 450 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಡಬಲ್ ಡೆಕ್ಕರ್ ಪ್ಲೈಓವರ್ ಅನ್ನು ನಿರ್ಮಿಸಲಾಗಿದೆ. ನಾನು ಮಹಾರಾಷ್ಟ್ರದ ನಾಗ್ಪುರಕ್ಕೆ ಭೇಟಿ ನೀಡಿದಾಗ ಅಲ್ಲಿಯೂ ಇಂತಹ ಪ್ರಯೋಗಗಳಾಗಿರುವುನ್ನು ಗಮನಿಸಿದ್ದು, ಸಂಚಾರ ದಟ್ಟಣೆ ನಿಯಂತ್ರಿಸುವಲ್ಲಿಇವು ಸಹಕಾರಿಯಾಗಿವೆ. ವಿಶ್ವದರ್ಜೆಯ ಈ ಪ್ಲೈಓವರ್’ನಿಂದ ಟ್ರಾಫಿಕ್ ಕಡಿಮೆಯಾಗಲಿದ್ದು, ವಾಹನ ಸವಾರರಿಗೆ ಅನುಕೂಲವಾಗಲಿದೆ.
ಅಲ್ಲದೆ ಸಿಗ್ನಲ್-ಮುಕ್ತ ಕಾರಿಡಾರ್ ಆಗಿ ಪರಿವರ್ತಿಸುವಲ್ಲಿ ಇದು ಮಹತ್ವದ ಪಾತ್ರವಹಿಸಲಿದೆ. ರಾಗಿಗುಡ್ಡದಿಂದ ಇನ್ಮುಂದೆ ಸಿಗ್ನಲ್ ಇಲ್ಲದೆ ಸಿಲ್ಕ್ ಬೋರ್ಡ್ ಜಂಕ್ಷನ್ಗೆ ಪ್ರಯಾಣಿಸಲು ಅವಕಾಶ ಸಿಗಲಿದೆ. ಬೆಂಗಳೂರಿನಲ್ಲಿ ಹೊಸದಾಗಿ ನಿರ್ಮಾಣವಾಗಲಿರುವ ಮೆಟ್ರೋ ನಿಲ್ದಾಣಗಳಲ್ಲಿಯೂ ಈ ರೀತಿಯ ಡಬಲ್ ಡೆಕ್ಕರ್ ಪ್ಲೈಓವರ್ ನಿರ್ಮಾಣ ಮಾಡಲಿದ್ದು, ಈ ಕುರಿತು ಚರ್ಚಿಸಿ ಕಾರ್ಯರೂಪಕ್ಕೆ ತರಲು ನಾವು ಬದ್ಧರಾಗಿದ್ದೇವೆ.
ರಾಜ್ಯದ ವ್ಯಕ್ತಿಯೊ ಬ್ಬರಿಂದ ಖರೀದಿಸಿದ್ದ ಜಾಗ್ವಾರ್ ಕಾರಿಗೂ ಅದೇ ರೀತಿ ನಕಲಿ ನಂಬರ್ ಪ್ಲೇಟ್ ಹಾಕಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ದ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಆಯುಕ್ತರು ಹೇಳಿದರು.