Published
5 months agoon
By
Akkare Newsಬೆಂಗಳೂರು:ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಎಲ್ಲಾ ಆರೋಪಿಗಳಿಗೆ ನ್ಯಾಯಾಂಗ ಬಂಧನವನ್ನು 14 ದಿನಗಳ ಕಾಲ ವಿಸ್ತರಣೆ ಮಾಡಿ ನ್ಯಾಯಾಧೀಶ ವಿಶ್ವನಾಥ ಪಿ ಗೌಡ ಜು.18ರಂದು ಆದೇಶ ಹೊರಡಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್, ಪವಿತ್ರಾ ಗೌಡ ಹಾಗೂ ಇನ್ನುಳಿದ ಆರೋಪಿಗಳು ಹಾಜರಾಗಿದ್ದರು. ಎಲ್ಲರಿಗೂ 14 ದಿನಗಳ ಕಾಲ ಅಂದರೆ ಆಗಸ್ಟ್ 1ರ ತನಕ ನ್ಯಾಯಾಂಗ ಬಂಧನ ಮುಂದುವರಿಯಲಿದೆ.
ದರ್ಶನ್‌ಗೆ ಬೇಲ್ ಕಷ್ಟ ಎಂದ ಪತ್ನಿ, ಸಹೋದರ:
ಜೈಲಿನಲ್ಲಿರುವ ದರ್ಶನ್‌ನನ್ನು ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಕರ್ ತೂಗುದೀಪರವರು ಭೇಟಿ ಮಾಡಿ ಅರ್ಧ ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ದರ್ಶನ್ ಜೊತೆ ಮಾತನಾಡಿದ ಅವರು ಸದ್ಯಕ್ಕೆ ಬೇಲ್ ಸಿಗುವುದು ಕಷ್ಟಕರವಾಗಿದ್ದು, ಬೇಲ್ ಗಾಗಿ ಪ್ರಯತ್ನ ಪಡುತ್ತಿರುವುದಾಗಿ ಹೇಳಿದ್ದಾರೆ. ಇನ್ನು ಜೈಲಿನಲ್ಲಿರುವ ದರ್ಶನ್ ಗೆ ಸ್ವಲ್ಪ ಕಾಲ ಸಮಾಧಾನದಿಂದಿರುವಂತೆ ಹೇಳಿದ್ದಾರೆ. ಕೊಲೆ ಆರೋಪಿಗಳಾದ ದರ್ಶನ್ ತಂಡದ ಪರ ಪೊಲೀಸರು ಸಾಕ್ಷ್ಯಾಧಾರಗಳನ್ನು ಬಲಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.